×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು : ಹೊಸಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನಾಲ್ಕನೇ ದಿನದ “ಧಾರ್ಮಿಕ ಸಭೆ & ಸಾಂಸ್ಕೃತಿಕ ಕಾರ್ಯಕ್ರಮ

ಕಾಪು :ಹೊಸಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಇಂದು ದಿನಾಂಕ 28-02-2025 ರಂದು ನಡೆದ ನಾಲ್ಕನೇ ದಿನದ “ಧಾರ್ಮಿಕ ಸಭೆ & ಸಾಂಸ್ಕೃತಿಕ ಕಾರ್ಯಕ್ರಮ”ದಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಗದ್ಗುರು ಶ್ರೀ ಶಂಕರಾಚಾರ್ಯರ ಸಂಸ್ಥಾನಂ ಶ್ರೀ ಎಡನೀರು ಮಂಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದರು ಹಾಗೂ ಕೇಮಾರು ಸಂದೀಪನಿ ಮಠದ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಕಲಡ್ಕ ಶ್ರೀರಾಮ ವಿದ್ಯಾಕೇಂದದ ಕಲಡ್ಕ ಪ್ರಭಾಕರ್ ಭಟ್, ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಎಚ್.ಎಸ್ ಬಲ್ಲಾಲ್, ಉಡುಪಿ ಸ್ಪೋರ್ಟ್ಸ್ & ಗೈಡ್ಸ್ ಜಿಲ್ಲಾ ಆಯುಕ್ತರಾದ ಜಯಕರ್ ಶೆಟ್ಟಿ ಇಂದ್ರಾಳಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ, ಸಾಯಿ ಬಾಬಾ ಮಂದಿರ ಆಡಳಿತ ಮೊಕ್ತೇಸರರಾದ ದಿವಾಕರ್ ಶೆಟ್ಟಿ ಕೊಡವೂರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುಹಾಸ್ ಹೆಗ್ಡೆ, ಹಿರಿಯರಾದ ಶಂಭು ಶೆಟ್ಟಿ, ಉದ್ಯಮಿಗಳಾದ ಪುರುಶೋತ್ತಮ್ ಶೆಟ್ಟಿ, ಮಸ್ಕತ್ ದಿವಾಕರ್ ಶೆಟ್ಟಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *