ಕರಾಚಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಇಂದು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ದುಬೈಯಲ್ಲಿ ಮುಷರಫ್ ವಿಧಿವಶರಾಗಿದ್ದಾರೆ .ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು

2007ರಲ್ಲಿ ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. 2013ರಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಪಾಕಿಸ್ತಾನದ ಪೇಶಾವರ ಹೈಕೋರ್ಟ್ ನ ವಿಶೇಷ ಪೀಠ ಮುಷರಫ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು

