×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಹಿಳೆ ಸಮಾಜ ಬದಲಾವಣೆಯ ಶಿಲ್ಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ

ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಪ್ಯಾರ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ವಿಶ್ವಮಹಿಳಾ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಉಡುಪಿಯ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿಯವರು ಮಹಿಳೆ ಸಮಾಜ ಬದಲಾವಣೆಯ ಶಿಲ್ಪಿ ಪುರುಷ ಮತ್ತು ಮಹಿಳೆ ಸಮಾನವಾಗಿ ಕೊಡುಗೆ ನೀಡಿದರೆ ಮಾತ್ರ ಸಮಾಜ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಎಂದು ಹೇಳಿದರು. ಗೌರವ ಅತಿಥಿಯಾಗಿ ಆಗಮಿಸಿದ ಉಡುಪಿಯ ಪ್ರಸಿದ್ಧ ವಕೀಲೆಯಾದ ಶ್ರೀಮತಿ ಮೇರಿ ಶ್ರೇಷ್ಠ ರವರು ಮಾತನಾಡಿ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯ ಜವಬ್ದಾರಿಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ನಾಡೋಜ ಡಾ| ಕೃಷ್ಣಪ್ರಸಾದ್ ಕೂಡ್ಡುರವರು ಮಾತನಾಡಿ ಮಹಿಳೆಯರ ತ್ಯಾಗ, ಪುರುಷನ ಏಳಿಗೆಯಲ್ಲಿ ಮಹಿಳೆಯ ಪಾತ್ರದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ರವರು ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿಯೊಂದು ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು. ವೇದಿಕೆಯಲ್ಲಿ ಕಾಲೇಜಿನ ಸಿ.ಓ.ಓ. ಡಾ| ಗೌರಿ ಪ್ರಭು, ಎಚ್.ಆರ್.ತಾರಾ ಶಶಿಧರ್ ಉಪಸ್ಥಿತರಿದ್ದರು. ಆರಂಭದಲ್ಲಿ ವಿದ್ಯಾರ್ಥಿ ದೇವರಾಜ್ ಸ್ವಾಗತಿಸಿದರೆ, ವಿದ್ಯಾರ್ಥಿ ಪವನ್ ಕುಮಾರ್ ವಂದಿಸಿದರು. ಕಾಲೇಜಿನ ಸಂಚಾಲಕರಾದ ಶ್ರೀ ಮಾಧವ ಪೂಜಾರಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Leave a Reply

Your email address will not be published. Required fields are marked *