×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ : ಹೆಜಮಾಡಿ ಅಗ್ನಿಶಾಮಕ ಠಾಣಾ ಕಟ್ಟಡಕ್ಕೆ ಕಾಪು ಶಾಸಕರಿಂದ ಗುದ್ದಲಿ ಪೂಜೆ.

ರೂ 2.33 ಕೋಟಿ ವೆಚ್ಚದಲ್ಲಿ ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಪಡುಬಿದ್ರಿ ಸಮೀಪದ ಹೆಜಮಾಡಿ ಬಳಿ ಕೆ-ಸೇಫ್-2 ಯೋಜನೆಯಡಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ 2.33 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 14-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಶಾಸಕರ ಗುರ್ಮೆ ಸುರೇಶ್ ಶೆಟ್ಟಿ ಅವರ ನಿರಂತರ ಪ್ರಯತ್ನದಿಂದ ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇಂದು ಇದರ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೇಮಚಂದ್ರ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ಅಗ್ನಿಶಾಮಕ ದಳದ ಅಧಿಕಾರಿಗಳು, ಹೆಜಮಾಡಿ, ಪಡುಬಿದ್ರಿ, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.*

Leave a Reply

Your email address will not be published. Required fields are marked *