ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಬೂತ್ ಮಟ್ಟದಲ್ಲಿ ನಡೆಯಲಿರುವ “ಒನ್ ಬೂತ್ ಟೆನ್ ಯೂತ್” ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ದಿನಾಂಕ 16-03-2025 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಉಪಾಧ್ಯಕ್ಷರಾದ ಸಚಿನ್, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ ಪ್ರಧಾನ ಕಾರ್ಯದರ್ಶಿಗಳಾದ ರಂಜಿತ್ ಮಟ್ಟಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

