×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿರೋಧ ಪಕ್ಷಗಳ ಸದಸ್ಯರ ಅಭಿಪ್ರಾಯಗಳನ್ನು ಕೂಡ ಕಡೆಗಣಿಸಿ ಏಕಾಏಕಿ ತೀರ್ಮಾನ ಕೈಗೊಂಡಿರುವುದು ಆಡಳಿತ ಪಕ್ಷದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ – ಡಾ.ಶೇಖ್ ವಹಿದ್ ದಾವೂದ್ 

ವಿರೋಧ ಪಕ್ಷಗಳ ಸದಸ್ಯರ ಅಭಿಪ್ರಾಯಗಳನ್ನು ಕೂಡ ಕಡೆಗಣಿಸಿ ಏಕಾಏಕಿ ತೀರ್ಮಾನ ಕೈಗೊಂಡಿರುವುದು ಆಡಳಿತ ಪಕ್ಷದ ಸರ್ವಾಧಿಕಾರಿ ಧೋರಣೆ .ವಕ್ಸ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯು ಮುಸ್ಲಿಂ ಸಮುದಾಯವನ್ನು ತೀವ್ರ ಆತಂಕಕ್ಕೆ ತಳ್ಳಿದ ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ವಿಧೇಯಕವನ್ನು ಯಾವುದೇ ಬದಲಾವಣೆಯಿಲ್ಲದೆ ಅನುಮೋದಿಸಿರುವುದು ಅತ್ಯಂತ ನಿರಾಶಾದಾಯಕ ಬೆಳವಣಿಗೆಯಾಗಿದೆ. ವಿರೋಧ ಪಕ್ಷಗಳ ಸದಸ್ಯರ ಅಭಿಪ್ರಾಯಗಳನ್ನು ಕೂಡ ಅವಗಣಿಸಿ ಏಕಾಏಕಿ ತೀರ್ಮಾನ ಕೈಗೊಂಡಿರುವುದು ಆಡಳಿತ ಪಕ್ಷದ ಸರ್ವಾಧಿಕಾರಿ ಧೋರಣೆ. ಭಾರತದ ಅತ್ಯಂತ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿರುವ, ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ದೇಶ ಕಟ್ಟುವ ಕೆಲಸದಲ್ಲೂ ನಿರ್ಣಾಯಕ ಪಾತ್ರ ವಹಿಸಿರುವ ಮುಸ್ಲಿಂ ಸಮುದಾಯವು ಆಡಳಿತ ವರ್ಗದಿಂದ ಅನ್ಯಾಯಕ್ಕೊಳಗಾಗುತ್ತಲೇ ಇದೆ. ಸಂವಿಧಾನದತ್ತ ಹಕ್ಕುಗಳನ್ನು ಕಬಳಿಸುವ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗಾಳಿಗೆ ತೂರುವ ಕೃತ್ಯವಾಗಿದ್ದು, ವಿಶೇಷತಃ ಮುಸ್ಲಿಮರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಎಂದು ಎಐಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶೇಖ್ ವಹಿದ್ ದಾವೂದ್ಆಕ್ರೋಶ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *