×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.  6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ.  ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ.  ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.  ಮಧ್ಯಾಹ್ನ 1:30ರಿಂದ http://www.karresults.nic.in . ವೆಬ್‌ಸೈಟಿನಲ್ಲಿ ಫಲಿತಾಂಶ ಲಭ್ಯವಿದೆ.

Leave a Reply

Your email address will not be published. Required fields are marked *