×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಜನಾಕ್ರೋಶ ಯಾತ್ರೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, , ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಜನಾಕ್ರೋಶ ಯಾತ್ರೆ’ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಜನಾಕ್ರೋಶ ಯಾತ್ರೆ ಇಂದು ಉಡುಪಿಗೆ ಆಗಮಿಸಿತು. ಬಳಿಕ ಪ್ರತಿಭಟನಾ ಜಾಥಾ ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಸಾಗಿ ಬಂತುಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, , .ರಾಜ್ಯ ಸರ್ಕಾರದ ಆಡಳಿತ ವೈಖರಿ ನೋಡಿದರೆ ಇದು ಜನಪ್ರಿಯ ಸರಕಾರ ಅಲ್ಲ. ಇದು ಕೇವಲ ಜಾಹಿರಾತಿನ ಸರಕಾರ. ಇದು ಬಡವರ ಪರವಾಗಿ ಇರುವ ಸರ್ಕಾರ ಅಲ್ಲ. ಬೆಲೆ ಏರಿಕೆ ಮೂಲಕ ಬಡವರಿಗೆ ಬರೆ ಎಳೆಯುವ ಸರಕಾರ. ಇದು ಅಭಿವೃದ್ಧಿ ಶೂನ್ಯ ಸರ್ಕಾರ. ಅಹಿಂದ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ. ಆದರೆ ಹಿಂದುಳಿದ ಸಮುದಾಯವನ್ನು ನಿರ್ಲಕ್ಷ್ಯ

ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು‌. ಕಾಪು ಮಾರಿಯಮ್ಮನ ದೇಗುಲಕ್ಕೆ ಅನುದಾನ ಕೇಳಿ ಐದು ಬಾರಿ ಹೋಗಿದ್ದರಂತೆ. ಆದರೆ ಒಂದು ನಯಾ ಪೈಸೆ ಅನುದಾನ ನೀಡಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ದೇವಸ್ಥಾನ ಮಠಮಾನ್ಯಗಳಿಗೆ ಅನುದಾನ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಮೌಲ್ವಿಗಳ ಸಂಬಳ ಜಾಸ್ತಿ ಮಾಡಿದರು. ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂರಿಗೆ ನಾಲ್ಕು ಪರ್ಸೆಂಟ್ ಜಾಸ್ತಿ ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕರು ಹೋರಾಟ ಮಾಡಿದ್ದಾರೆ. ಹೋರಾಟ ಮಾಡಿದ ಶಾಸಕರನ್ನು ಆರು ತಿಂಗಳು ಸಸ್ಪೆಂಡ್ ಮಾಡಿದ್ದಾರೆ. ಪುಣ್ಯಾತ್ಮ ಸ್ಪೀಕರ್ ಈ ಕೆಲಸ ಮಾಡಿದ್ದಾರೆ. ಇವರು ಸಂವಿಧಾನ ಅಂಬೇಡ್ಕರ್ ಬಗ್ಗೆ ಮಾತನಾಡುತ್ತಾರೆ. ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡು ಮೋಸ ಮಾಡಿದ ಪಕ್ಷ ಕಾಂಗ್ರೆಸ್. ಶೈಕ್ಷಣಿಕ ಸಾಮಾಜಿಕವಾಗಿ ಮೇಲೆತ್ತುವ ಕೆಲಸ ಮಾಡಿಲ್ಲ ಎಂದು ಗುಡುಗಿದರು

Leave a Reply

Your email address will not be published. Required fields are marked *