×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಎ.18 ರಂದು ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ: ಯಶಸ್ವಿ ಗೊಳಿಸಲು SDPI ಕರೆ

ಉಡುಪಿ : ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರ ಅಪರಾಹ್ನ 3 ಗಂಟೆಗೆ ಅಡ್ಯಾರ್ ಕಣ್ಣೂರ್ ಶಾ ಗಾರ್ಡನ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲೆಯ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಬೆಂಬಲಿಗರು, ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು SDPI ಕರೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಉಲೆಮಾ ಕೋರ್ಡಿನೇಶನ್ ಕರ್ನಾಟಕ ವತಿಯಿಂದ ಉಭಯ ಖಾಝಿಗಳ ನೇತೃತ್ವದಲ್ಲಿ ಎಪ್ರಿಲ್ 18, ಶುಕ್ರವಾರದಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಡೆಯಲಿರುವ ಐತಿಹಾಸಿಕ ಪ್ರತಿಭಟನಾ ಸಭೆಗೆ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *