×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಗುಂಪು ಹತ್ಯೆ ಪ್ರಕರಣಕ್ಕೆ ಸರ್ಕಾರವೇ ಹೊಣೆ, ಮೃತ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ-ಗೃಹ ಮಂತ್ರಿ ರಾಜೀನಾಮೆಗೆ ನೀಡಲಿ: ಅಪ್ಸರ್ ಕೊಡ್ಲಿಪೇಟೆ ಆಗ್ರಹ.

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮೊನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಹಾಗೂ ಬಾಲಿಶ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಇಂದು ಪ್ರತಿಭಟನೆಯನ್ನು ನಡೆಸಲಾತಿತು. ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಪ್ಸರ್ ಕೊಡ್ಲಿಪೇಟೆ ಭಾಗವಹಿಸಿ ಈ ಗುಂಪು ಹತ್ಯೆಯ ಹಿಂದಿರುವ ಷಡ್ಯಂತರವನ್ನು ಬಯಲಿಗೆಳೆಯಬೇಕು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕು, ಮೃತ ಅಶ್ರಫ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರವನ್ನು ನೀಡಬೇಕು ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ SDPI ಉಡುಪಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಂ ಆದಿ ಉಡುಪಿ ಮಾತನಾಡಿದರು. ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ YS ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *