×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ -ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರಿನ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ 8 ಜಿಲ್ಲೆಗಳ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಸಮವಸ್ತ್ರದಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸ್ಪೀಕ‌ರ್ ಯುಟಿ ಖಾದರ್ ಸಹಕಾರಿ ಧ್ವಜವಂದನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಜಸಂಭ್ರಮ ಉದ್ಘಾಟಿಸಿ ಮಾತನಾಡಿ ನಿಮ್ಮ ಕುಟುಂಬ ಬೆಳೆಯಬೇಕು, ಹೆಣ್ಣುಮಕ್ಕಳಿಗೆ ಆರ್ಥಿಕ ಶಕ್ತಿ ಕೊಡಬೇಕು ಎಂಬ ನಿಟ್ಟಿನಲ್ಲಿ ಸ್ವಸಹಾಯ ಸಂಘ ಜನ್ಮತಳೆದಿದೆ. ಧರ್ಮ, ಶಾಂತಿ-ನೆಮ್ಮದಿಗೆ ಹೆಸರಾದ ಈ ಪವಿತ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಧರ್ಮ-ಸಂಸ್ಕೃತಿಯನ್ನು ಕಾಪಾಡಿಕೊಂಡು, ಇಲ್ಲಿನ ಇತಿಹಾಸ ಪರಂಪರೆಯನ್ನು ಕಾಪಾಡಿಕೊಂಡು ಹೋಗಬೇಕಾದ ಹೊಣೆಗಾರಿಕೆ ಮಹಿಳೆಯರದ್ದಾಗಿದೆ ಎಂದು ಹೇಳಿದರು.

ರಾಜ್ಯಪಾಲ ಡಾ.ಥಾವರ್ ಚಂದ್ ಗೆಹೋಟ್ ಮಾತನಾಡಿ ನಿರಂತರವಾಗಿ 25 ವರ್ಷಗಳ ಕಾಲ ನವೋದಯ ಸ್ವಸಹಾಯ ಗುಂಪುಗಳನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ಸ್ತ್ರೀಯರನ್ನು ಸ್ವಾವಲಂಬಿಯನ್ನಾಗಿ ಮಾಡುವ ಈ ಕಾಯಕದ ರೂವಾರಿಯಾದ ಎಂಎನ್ ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸುತ್ತೇನೆ. ದೇಶದಲ್ಲಿನ ಈ ಯುದ್ಧ ಸನ್ನಿವೇಶದಲ್ಲಿ ನಾವೆಲ್ಲ ಹೇಗೆ ಒಗ್ಗಟ್ಟಾಗಿದ್ದೇವೆಯೋ ಅದೇ ರೀತಿ ಸಹಕಾರಿ ಕ್ಷೇತ್ರದಲ್ಲೂ ಒಗ್ಗಟ್ಟು ಮುಖ್ಯ ಎಂದು ಯುದ್ಧ ಸಂಘರ್ಷದ ಈ ಸಂದರ್ಭದಲ್ಲಿ ಸೈನಿಕರ ಕಲ್ಯಾಣ ನಿಧಿಗೆ 3 ಕೋಟಿ ರೂಪಾಯಿ ದೇಣಿಗೆ ನೀಡಿರುವ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಅವರನ್ನು ಶ್ಲಾಘಿಸುವುದಾಗಿ ರಾಜ್ಯಪಾಲ ಗೆಹೋಟ್ ತಿಳಿಸಿದರು.

ಈ ಸಂದರ್ಭದಲ್ಲಿ ಎಂಎನ್ ರಾಜೇಂದ್ರ ಕುಮಾರ್ ದಂಪತಿಗಳನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿಸಹಕಾರ ಸಚಿವ ಕೆ.ಎನ್.ರಾಜಣ್ಣ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್, ಅಬಕಾರಿ ಸಚಿವ ಆ‌ರ್.ಬಿ.ತಿಮ್ಮಾಪುರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಇಷ್ಟೋ ಸಂಸ್ಥೆಯ ಉದಯ ಶಂಕರ್ ಅವಸ್ತಿ, ಶಾಸಕರಾದ ಸುನಿಲ್ ಕುಮಾರ್, ಅಶೋಕ್ ಕುಮಾರ್ ರೈ, ಡಾ.ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಲಿ, ಯಶ್ ಪಾಲ್ ಸುವರ್ಣ, ಎಂಎಲ್ ಸಿಗಳಾದ ಐವನ್ ಡಿಸೋಜಾ, ಎಸ್.ಎಲ್.ಭೋಜೇಗೌಡ, ಬಂಟರ ಸಂಘದ ಐಕಳ ಹರೀಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾ‌ರ್ ಸೊರಕೆ, ಬಿ.ರಮಾನಾಥ ರೈ, ಅಭಯಚಂದ್ರ ಜೈನ್,ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಯುವ ಮುಖಂಡರಾದ ಮಿಥುನ್ ರೈ, ಇನಾಯತ್ ಅಲಿ, ಸಂಜೀವ ಮಠಂದೂರು, ಆ‌ರ್.ಪದ್ಮರಾಜ್, , ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಕ್ಷಿತ್ ಶಿವರಾಂ, ಕಿಶೋ‌ರ್ ಆಳ್ವ, ಡಾ.ಮೋಹನ್ ಆಳ್ವ, ಜಿಲ್ಲಾಧಿಕಾರಿ ಮು ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಅಪೆಕ್ಸ್ ಬ್ಯಾಂಕ್‌ ಮ್ಯಾನೇಜರ್ ದೇವರಾಜ್, ಡಾ.ಪಿ.ಎಲ್.ಧರ್ಮ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *