×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಕಾರ್ಯಕ್ರಮ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭವು ದಿನಾಂಕ 10 ಮೇ 2025 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಡಾ. ರಾಧಕೃಷ್ಣ ಐತಾಳ್ ಇವರು ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮಾತನಾಡಿ ಅಂತಿಮ ವರ್ಷದ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಕಾಣಲು ಹೆಚ್ಚು ಶ್ರಮ ಪಡಬೇಕೆಂದು ತಿಳಿಸಿದರು. ಮೂರನೇ ವರ್ಷದ ವಿದ್ಯಾರ್ಥಿಗಳು ಅನೇಕ ಮನೋರಂಜನಾ ಕಾರ್ಯಕ್ರಮವನ್ನು ನಡೆಸುವ ಮೂಲಕ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಮನೋರಂಜಿಸಿದರು, ಈ ಸಂದರ್ಭದಲ್ಲಿ ಪ್ರತೀ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಎರಡು ಉತ್ತಮ ಪ್ರಾಜೆಕ್ಟ್ಗಳಿಗೆ ಬಹುಮಾನ ನೀಡಿಲಾಯಿತು ಮತ್ತು ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು

Leave a Reply

Your email address will not be published. Required fields are marked *