×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ: ಸ್ಮಾರ್ಟ್ ತರಗತಿ ಉದ್ಘಾಟನೆ

ಕಾಪುವಿನ ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶತಮಾನೋತ್ಸವ ಕಟ್ಟಡದಲ್ಲಿ ಹೊಸದಾಗಿ ನಿರ್ಮಿಸಲಾದ ಸಭಾ ಭವನ ಮತ್ತು ಸ್ಮಾರ್ಟ್ ಕ್ಲಾಸ್ ವಿಭಾಗವನ್ನು ವಿಜಯಾ ಬ್ಯಾಂಕ್ ನ ನಿವೃತ್ತ ಜನರಲ್ ಮ್ಯಾನೇಜರ್ ಆದ ಕಾಪು ಜಯಕರ ಶೆಟ್ಟಿ ಇವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಅತ್ಯಂತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ಹಲವಾರು ಮಂದಿ ವಿದ್ಯಾರ್ಜನೆ ಗೈದು ಉನ್ನತ ಸ್ಥಾನಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅವರ ಬದುಕಿಗೆ ಆಧಾರ ಸ್ಥಂಭವಾಗಿದ್ದ ಈ ವಿದ್ಯಾಸಂಸ್ಥೆ ಪಾಠ – ಪಾಠೇತರ ಚಟುವಟಿಕೆಗಳಲ್ಲಿ ಜಿಲ್ಲೆ, ರಾಜ್ಯವನ್ನು ಪ್ರತಿನಿಧಿಸಿವೆ.ಸಾವಿರಾರು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ನಿರ್ಮಿಸಲ್ಪಟ್ಟ ಹೊಸ ಸಭಾಭವನ ಮತ್ತು ಸ್ಮಾರ್ಟ್ ಕ್ಲಾಸ್ ತರಗತಿಗಳು ಬದಲಾದ ಸನ್ನಿವೇಶದಲ್ಲಿ ಅತ್ಯಂತ ಅವಶ್ಯಕ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಲಿ ಹಾಗೂ ಮುಂದಿನ ಪೀಳಿಗೆಗೆ ಇವುಗಳು ಪ್ರೇರಣೆಯನ್ನು ನೀಡಲಿ ಎಂದು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಚಾಲಕರಾದ ಡಾ|| ಕೆ. ಪ್ರಶಾಂತ್ ಶೆಟ್ಟಿಯವರು ದೀಪ ಬೆಳಗಿಸಿ, ಇಂದಿನ ಸಮಯದಲ್ಲಿ ಮಕ್ಕಳ ಪ್ರತಿಭೆ ವಿಶಿಷ್ಟವಾಗಿ ಅರಳಬೇಕಾದರೆ ಸ್ಮಾರ್ಟ್ ತರಗತಿಗಳು ಕೂಡಾ ಮೂಲ ಕಾರಣವಾಗಿರುತ್ತದೆ. ಇದರ ಪ್ರಯೋಜನ ಮಕ್ಕಳಿಗೆ ಕ್ರಿಯಾಶೀಲವಾಗಿ ಸಿಗಲಿ ಹಾಗೂ ಸುಸಜ್ಜಿತ ಸಭಾಭವನ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಶ್ರೀ ಕಾಪು ಕಾಪು ಗೋವಿಂದ ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ, ಸದಸ್ಯರಾದ ಪನ್ನಾ ಪಿ. ಶೆಟ್ಟಿ, ಎಲ್. ಐ .ಸಿ.ಕಾಪು ಇದರ ನಿವೃತ್ತ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಕಾಪು,ಮಕರ ಕನ್ಸ್ಟ್ರಕ್ಷನ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮಲ್ಲಾರ್, ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ಶೈಕ್ಷಣಿಕ ಸಂಯೋಜಕ ಶಿವಣ್ಣ ಬಾಯರ್, ಶಿಕ್ಷಕ – ಶಿಕ್ಷಕೇತರರು, ವಿದ್ಯಾರ್ಥಿ ಹಾಗೂ ಹೆತ್ತವರು ಉಪಸ್ಥಿತರಿದ್ದರು.
ಪ್ರಾಂಶುಪಾಲ ನೀಲಾನಂದ ನಾಯ್ಕ್ ಸ್ವಾಗತಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಜಲಕ್ಷ್ಮೀ ರಾವ್ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕಿ ಸುನೈನಾ ನಿರೂಪಿಸಿದರು.

Leave a Reply

Your email address will not be published. Required fields are marked *