×
Our website is made possible by displaying online advertisements to our visitors. Please consider supporting us by whitelisting our website.
  • 9880645340

 ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿ  ಎಚ್. ನಾರಾಯಣ ಸಭಾಂಗಣ ಉದ್ಘಾಟನೆ

ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ ಎಚ್. ನಾರಾಯಣ ಸಭಾಂಗಣದ ಉದ್ಘಾಟನೆ ಜೂ. 8ರಂದು ಬೆಳಿಗ್ಗೆ 9.30ಕ್ಕೆ ದ್ಘಾಟನೆಗೊಳ್ಳಲಿದೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಸಭಾಂಗಣ ಉದ್ಘಾಟಿಸಲಿದ್ದಾರೆ. ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.  ಉದ್ಘಾಠನಾ ಸಮಾರಂಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ, ಹೆಜಮಾಡಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಮೆಂಡನ್, ಬಿ. ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಕರ್ಜೆ, ಬಿ. ಅಶೋಕ್ ಕುಮಾ‌ರ್ ಶೆಟ್ಟಿ, ಬೆಳ್ಳಂಪಳ್ಳಿ, ರಾಜೇಶ್ ಪಾಂಗಾಳ, ಮೋಹನ್ ಸುವರ್ಣ, ಎಚ್. ಬಿ. ಮೊಹಮ್ಮದ್ ಉಪಸ್ಥಿತರಿರುವರು.   ಡಾ. ಐಕಳ ದೇವಿಪ್ರಸಾದ್ ಶೆಟ್ಟಿ, ಸಂಸ್ಥೆಯ ನಿವೃತ್ತ ಸಿಬ್ಬಂದಿಗಳಾದ ಶ್ರೀನಿವಾಸ ಭಟ್ ಮತ್ತು ಶಕುಂತಳ, 2024-25 ನೇ ಸಾಲಿನಲ್ಲಿ ಶೇ.100 ಫಲಿತಾಂಶ ಸಾಧಿಸಿದ ಶಾಲೆಗಳಿಗೆ, 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರಾಂಕ್ ಪಡೆದ ಭೂಮಿಕಾ ಎಚ್. ಪುತ್ರನ್ ಅವರನ್ನು ಅಭಿನಂದಿಸಲಾಗುವುದು.  2024-25 ನೇ ಸಾಲಿನ ಪಿ.ಯು.ಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಾರ್ಯವ್ಯಾಪ್ತಿಯ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡಿ ಶೇ.95 ಮೇಲ್ಪಟ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *