ಇತ್ತೀಚಿಗೆ ದೆಹಲಿಯ ತಾಲ್ ಕಟೋರ ದಲ್ಲಿ, ಮಾರ್ಷಿಯಲ್ ಆರ್ಟ್ಸ್ ಮತ್ತು ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ನಡೆದ ಕೊಬುಡೊ ನೇಶನಲ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಭಾಗವಹಿಸಿದ ಕಾಪು ದಂಡತೀರ್ಥ ಪ್ರೌಢಶಾಲೆಯ ವಿದ್ಯಾರ್ಥಿನಿ ಫಾತಿಮಾ ಸದಫ್ ಇವರು ಚಿನ್ನ ಮತ್ತು ಕಂಚಿನ ಪದಕದೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾಳೆ. ಶಿಕ್ಷಕ ಶಂಶುದ್ದೀನ್ ಶೇಖ್ ಇವರ ಮಾರ್ಗದರ್ಶನದೊಂದಿಗೆ ಪ್ರಶಸ್ತಿ ಗೆಲ್ಲಲು ಕಾರಣರಾದ ವಿದ್ಯಾರ್ಥಿನಿಯನ್ನು ಸಂಚಾಲಕರು ವಿದ್ಯಾಸಂಸ್ಥೆಯಲ್ಲಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಂಶುಪಾಲ ನೀಲಾನಂದ್ ನಾಯ್ಕ್ ಹಾಗೂ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

