×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 11 ವರ್ಷ ಪೂರೈಸಿದ ಪ್ರಯುಕ್ತ ವಿಕಸಿತ ಭಾರತ ಸಂಕಲ್ಪ ಸಭೆ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 11 ವರ್ಷ ಪೂರೈಸಿದ ಪ್ರಯುಕ್ತವಾಗಿ “ವಿಕಸಿತ ಭಾರತ ಸಂಕಲ್ಪ ಸಭೆ” ಇಂದು ದಿನಾಂಕ 19-06-2025 ರಂದು ಕಾಪುವಿನ ವೀರಭದ್ರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಿಯಾದ 11 ವರ್ಷದಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದಿದೆ ಇನ್ನೂ ಕೆಲವೇ ವರ್ಷಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ. ರಕ್ಷಣಾ ಕ್ಷೇತ್ರದಲ್ಲಿ ಭಾರತ ಇಂದು ಸ್ವಾವಲಂಬಿ ಆತ್ಮ ನಿರ್ಭರ ಭಾರತವಾಗಿದೆ ಇಂದರಿಂದ ಶತ್ರು ರಾಷ್ಟ್ರಗಳಿಗೆ ನಡುಕ ಹುಟ್ಟಿಸಿದ್ದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಎಂದು ಹೇಳಿದ ಅವರು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ನಾವೆಲ್ಲರೂ ಸಜ್ಜಾಗೋಣ ಎಂದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಸುದರ್ಶನ್, ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್ ಪೆರ್ಣಂಕಿಲ, ನಿಕಟಪೂರ್ವ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಪ್ರಮುಖರಾದ ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *