ಕಾಪು : ಇಂದಿನ ದುಬಾರಿ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಿದೆ ಬಡವರಿಗೆ ಹಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಇಂದಿರಾ ಕ್ಯಾಂಟೀನ್, ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಲ್ಲರೂ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಪು ಪುರಸಭಾ ಕಚೇರಿ ಎದುರು ನಿರ್ಮಿಸಲದ ಇಂದಿರಾ ಕ್ಯಾಂಟೀನ್ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು ಸಮಾರಂಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಕಾಪು ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು,, ಮುಖಂಡರಾದ ಎಂ.ಎ.ಗಫೂರ್,ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಉಪ ವಿಭಾಗಧಿಕಾರಿ ರಶ್ಮಿ ನವೀನ್ ಚಂದ್ರ ಶೆಟ್ಟಿ, ನವೀನ್ ಚಂದ್ರ ಸುವರ್ಣ, ಗೀತಾ ವಾಗ್ಳೆ, ಶಾಂತಲತಾ ಶೆಟ್ಟಿ, ನವೀನ್ ಚಂದ್ರ ಜೆ ಶೆಟ್ಟಿ, ಶರ್ಫುದ್ಧೀನ್ ಶೇಖ್,ರಮೀಜ್ ಹುಸೈನ್ ಮಹಮ್ಮದ್ ನಿಯಾಝ್, , ದಿವಾಕರ್ ಶೆಟ್ಟಿ ದೀಪಕ್ ಏರ್ಮಾಲ್ ಕಿಶೋರ್ ಏರ್ಮಾಲ್ ಅಜೀಝ್ ಹೆಜಮಾಡಿ ಗಣೇಶ್ ಕೋಟ್ಯಾನ್ ,ಶೇಖಬ್ಬ ಉಚ್ಚಿಲ ಪ್ರಭಾ ಬಿ ಶೆಟ್ಟಿ ಸತೀಶ್ ದೇಜಡಿ ಮ್ತತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


