ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ ರೋಟರಿ ಕ್ಲಬ್ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ ಇವರ ಸಹಯೋಗದೊಂದಿಗೆ ನಡೆದ ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್ ಅಳವಡಿಕೆ ಕಾರ್ಯಕ್ರಮವನ್ನು ಜೆಸಿಐ ಮಾಜಿ ಅಧ್ಯಕ್ಷ ಜಯ ಶೆಟ್ಟಿ ಪದ್ರ ಉದ್ಘಾಟಿಸಿದರು. ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇವರ ಸಹಕಾರದೊಂದಿಗೆ ಪಡುಬಿದ್ರಿ ಬಸ್ ನಿಲ್ದಾಣ ಹಾಗೂ ಹೆಜಮಾಡಿ ಬಸ್ ನಿಲ್ದಾಣ ಮತ್ತು ಎರ್ಮಾಳು ಬಸ್ ನಿಲ್ದಾಣದಲ್ಲಿ ನಡೆಯಿತು. ವೈ ಸುಧೀರ್ ಕುಮಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ನಾಗರೀಕರೆಲ್ಲರೂ ಸ್ವಚ್ಛತೆಯನ್ನು ಕಾಪಾಡಿಕೊಂಡು ಬಂದರೆ ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು ಎಂದರು. ಕಾರ್ಯಕ್ರಮದಲ್ಲಿ ಜಯ ಶೆಟ್ಟಿಪದ್ರರವರು ವಾಹನದ ಹೊಗೆಯಿಂದ ಹೇಗೆ ಪರಿಸರವನ್ನು ಹೇಗೆ ಕಾಪಾಡಿಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪಡುಬಿದ್ರಿ ಸಿ.ಎ. ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್, ಉಪಾಧ್ಯಕ್ಷ ಗುರುವ ಪೂಜಾರಿ, ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಉಪಸ್ಥಿತರಿದ್ದರು. ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ನಿಖಿಲ್ ಪೂಜಾರಿ ನಿರೂಪಿಸಿ, ವಂದಿಸಿದರು.


