×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: ವ್ಯಾವಹಾರಿಕ ಪದ್ದತಿಗಳ ತರಬೇತಿ ಕಾರ್ಯಕ್ರಮ 

ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ “ವಿವಿಧ ಸಹಕಾರ ಸಂಘಗಳಿಗೆ ವ್ಯವಹಾರಿಕ ಪದ್ಧತಿಗಳ ಕುರಿತು ತರಬೇತಿ” ಕಾರ್ಯಕ್ರಮವು ಬುಧವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಛೇರಿ, ಸಹಕಾರ ಸಂಗಮದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಜೆಸಿಐ ವಲಯ-XVರ ಪೂರ್ವ ವಲಯಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಇನ್ನ ಉದ್ಘಾಟಿಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಹಕಾರಿ ಸೊಸೈಟಿಗಳ ಪದ್ಧತಿಯನ್ನು ಈಗಿನ ಪದ್ಧತಿಯ ಪ್ರಕಾರ ನೆಡೆಸಲು ತರಬೇತಿ ಅಗತ್ಯ ಇರುವ ನೆಲೆಯಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಸೂಚನೆ ಮೇರೆಗೆ ಏಳು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಇಂದು ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳಿಗೆ ವ್ಯವಹಾರಿಕ ಪದ್ಧತಿಗಳ ಕುರಿತು ತರಬೇತಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ರಾಜ್ಯ ಮಟ್ಟದ ಸಹಕಾರಿ ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಶ್ರೀಧರ್ ಪಿ.ಎಸ್‌ರವರು ಸಹಕಾರ ಸಂಘ, ಸಂಸ್ಥೆಗಳ ಪ್ರತಿನಿಧಿಗಳಿಗೆ ತರಬೇತಿ ನೀಡಿದರು‌.  ಈ ಸಂದರ್ಭ ಪಡುಬಿದ್ರಿ ಸಿ.ಎ.‌ ಸೊಸೈಟಿ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ನಿರ್ದೇಶಕರಾದ ಗಿರೀಶ್ ಪಲಿಮಾರು, ಕೃಷ್ಣ ಬಂಗೇರ, ಮಾಧವ ಆಚಾರ್ಯ, ವಾಸು ದೇವಾಡಿಗ, ಕಾಂಚನಾ, ರೋಹಿಣಿ ಎ., ಕುಸುಮಾ ಕರ್ಕೇರ, ಶಿವರಾಮ ಎನ್ ಶೆಟ್ಟಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಮತ್ತು ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.  ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಸ್ವಾಗತಿಸಿದರು. ನಿಖಿಲ್ ಪೂಜಾರಿ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *