ಕಾಪು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ನಾಳೆ, ದಿನಾಂಕ – 28/06/2025, ಶನಿವಾರ ದಂದು ಸಂಜೆ ಗಂಟೆ 5.00ಕ್ಕೆ, ಕಾಪು – ರಾಜೀವ್ ಭವನ ದಲ್ಲಿ ಜರುಗಲಿದೆ .ಕಾರ್ಯಕ್ರಮಕ್ಕೆ ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರು ವಿನಯ ಕುಮಾರ್ ಸೊರಕೆ, ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ (ಉತ್ತರ)ಅಧ್ಯಕ್ಷರಾದ ಸಂತೋಷ್ ಕುಲಾಲ್ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಇತರೆ ಘಟಕ / ಸಮಿತಿ / ವಿಭಾಗ ಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು / ಪದಾಧಿಕಾರಿಗಳು, ಎಲ್ಲ ಬೂತ್ ಸಮಿತಿಯ ಅಧ್ಯಕ್ಷರು / ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತಲಿರುವರು ಎಂದು ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಿಯಾಜ್ ಪಡುಬಿದ್ರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

