ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಸಹಕಾರ ಸಪ್ತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ಜರಗಿತು ಸಮಾರೋಪ ಕಾರ್ಯಕ್ರಮದ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಬೆಂಗಳೂರು ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು .ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಬಡವರು, ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಯೋಜನೆಗಳನ್ನು ಕ್ರಮಬದ್ಧ ವಾಗಿ ತಲುಪಿಸುವಲ್ಲಿ ಸಹಕಾರಿ ಸಂಘಗಳು ಮುಂಚೂಣಿಯಲ್ಲಿವೆ. ಸಹಕಾರಿ ಸಂಘವನ್ನು ಬೆಳೆಸಿದರೆ, ದೇಶದ ಅಭಿವೃದ್ಧಿ ಸಾಧ್ಯ. ಸಹಕಾರಿ ಸಂಘಗಳು ಸಹಕಾರಿ ತತ್ವದ ಅಡಿ ಕೆಲಸ ಮಾಡುತ್ತಿದ್ದು, ಲಾಭದ ದೃಷ್ಠಿಯಿಂದ ವ್ಯವಹರಿಸುತ್ತಿಲ್ಲ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ,ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಯ ಗ್ರಾಹಕರೊಂದಿಗೆ ಉತ್ತಮ ವ್ಯವಹಾರ ಮಾಡುತ್ತಿರುವ ಸೊಸೈಟಿ ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಹಾರೈಸಿದರು. ಪಡುಬಿದ್ರಿ ಸಹಕಾರಿ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಕರ್ನಾಟಕ ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಸಹಿತ ಸಹಕಾರಿ ರಂಗದ ಸಾಧಕರನ್ನು ಸನ್ಮಾನಿಸಲಾಯಿತು.


ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ ಸುವರ್ಣ, ಉಡುಪಿ ಸಹಕಾರಿ ಯೂನಿಯನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪ ನಿಬಂಧಕಿ ಲಾವಣ್ಯ ಕೆಆರ್, ಲೆಕ್ಕ ಪರಿಶೋಧನಾ ಉಪ ನಿರ್ದೇಶಕಿ ರೇಣುಕಾ ಜಿ, ಸಹಾಯಕ ನಿಬಂಧಕಿ ಸುಕನ್ಯ, ರಾಜ್ಯ ಹಾಲು ಉತ್ಪಾದಕರ ಮಹಾ ಮಂಡಲದ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ,ಪಡುಬಿದ್ರಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಅನಂತ ಪಟ್ಟಾಭಿ ರಾವ್, ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೋಭಾ ಎಚ್ ಪುತ್ರನ್, ಕಾರ್ಯಕ್ರಮ ಸಂಚಾಲಕ ನಿಖಿಲ್ ಪೂಜಾರಿ ನಿರ್ದೇಶಕರು ಉಪಸ್ಥಿತರಿದ್ದರು. ಅಧ್ಯಕ್ಷ ವೈ ಸುಧೀರ್ ಕುಮಾರ್ ಸ್ವಾಗತಿಸಿದರು.

