×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕಿಟ್ ವಿತರಣೆ ಯೋಜನೆ ಸ್ವಾಗತಾರ್ಹ: ಪ್ರದೀಪ್ ಬೇಲಾಡಿ

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ “ಇಂದಿರಾ ಕಿಟ್” ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ. ಇದೊಂದು ಜನಪರ ಯೋಜನೆಯಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ತೊಗರಿ ಬೇಳೆ, ಕಾಫಿ ಪುಡಿ, ಅಡುಗೆ ಎಣ್ಣೆ, ಚಹಾ ಪುಡಿ ಮುಂತಾದ ಅಗತ್ಯ ಆಹಾರ ಸಾಮಾಗ್ರಿಗಳ ವಿತರಣೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಅನುಕೂಲಗಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಷ್ಟ್ರದ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರತಿಯೊಂದು ಯೋಜನೆಯೂ ಅನುಕರಣೀಯವಾಗಿದೆ. ಪಡಿತರ ಜೊತೆಗೆ ನೀಡುತ್ತಿರುವ ಅಕ್ಕಿಯು ಕಾಳ ಸಂತೆಯಲ್ಲಿ ದುರುಪಯೋಗ ಆಗುತ್ತಿರುವುದನ್ನು ತಪ್ಪಿಸಲು “ಇಂದಿರಾ ಕಿಟ್” ಯೋಜನೆಯನ್ನು ಜಾರಿಗೊಳಿಸಿರುವುದು ಶ್ಲಾಘನೀಯ, ಸರ್ಕಾರದ ಯಾವುದೇ ಯೋಜನೆಗಳು ದುರುಪಯೋಗವಾಗದೇ ಅರ್ಹ ಫಲಾನುಭವಿಗಳಿಗೆ ಸಲ್ಲಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *