×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಂಟಕಲ್‌ : ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ವಿಟಿಯು ವಿಶ್ವ ವಿದ್ಯಾನಿಲಯದಿಂದ‌ ರ‍್ಯಾಂಕ್

ಬಂಟಕಲ್:‌ ಬೆಳಗಾವಿ ತಾಂತ್ರಿಕ  ವಿಶ್ವ ವಿದ್ಯಾನಿಲಯದ 25ನೇ ಘಟಿಕೋತ್ಸವದ ರ‍್ಯಾಂಕ್ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ 2021-25ನೇ ಸಾಲಿನ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ್‌ ಎಲ್‌ ಕಾಮತ್ ಮತ್ತು ನಿಧಿ ಪ್ರಭು ಕೆ ಇವರುಕ್ರಮವಾಗಿ ೩ನೇ ಮತ್ತು ೬ನೇ ರ‍್ಯಾಂಕ್‌ ಪಡೆದಿರುತ್ತಾರೆ.  ಇದು ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಂಸ್ಥೆಯ ಗುಣಮಟ್ಟದ ಶಿಕ್ಷಣವನ್ನು ಪ್ರತಿಬಿಂಬಿಸುತ್ತದೆ. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ, ಡಾ. ರಾಧಕೃಷ್ಣಎಸ್ ಐತಾಳ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ವಿದ್ಯಾರ್ಥಿಗಳ ಸಾಧನೆಗೆ ಅವರ ಪ್ರಯತ್ನದ ಜೊತೆಗೆ ಪ್ರಾಧ್ಯಾಪಕರ ಪ್ರಯತ್ನವೂ ಸಾಕ್ಷಿಯಾಗಿದೆ ಎಂದರು. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ  ಮಂಡಳಿ, ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್‌,    ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ  ಹಾರೈಸಿದ್ದಾರೆ.

Leave a Reply

Your email address will not be published. Required fields are marked *