×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯ ಮತ್ತು ಸುಳ್ಳು ಆರೋಪದ ವಿರುದ್ಧ ಪ್ರತಿಭಟನೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಪ್ರತಿಭಟನೆಯನ್ನು ಪಡುಬಿದ್ರಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ ನಡೆಯಿತು.    ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಸಬ್ಸಿಡಿ ರದ್ದು ಮಾಡಿ ಉಪಯುಕ್ತ ಆಹಾರದ ಮೇಲೆ ಜಿ ಎಸ್ ಟಿ ಯನ್ನು ಹಾಕುವುದರ ಮೂಲಕ ಬಡವರ ರಕ್ತ ಹೀರುವ ಕೆಲಸ ವನ್ನು ಕೇಂದ್ರ ದಲ್ಲಿ ಬಿ ಜೆ ಪಿ ಸರಕಾರ ಮಾಡುತ್ತಿದೆ ಬಿಜೆಪಿಯವರ ಸುಳ್ಳು ಮತ್ತು ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ಮಾಡುವುದರ ಮುಖೇನ ನೈಜತೆಯನ್ನು ಜನತೆಯ ಮುಂದೆ ಇಡುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು. ಹೇಳಿದರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಸರಕಾರ ನುಡಿದಂತೆ ಪಂಚ ಗ್ಯಾರಂಟಿಯನ್ನು ಅನುಷ್ಠಾನಕ್ಕೆ ತಂದು ಜನರ ಮನವನ್ನು ಗೆದ್ದಿದ್ದಾರೆ. ಈ ಗ್ಯಾರಂಟಿಯಿಂದಾಗಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದನ್ನು ಸಹಿಸಲಾಗದೆ ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.  ಎಂದರು ಕಾಪು ಬ್ಲಾಕ್ ಅಧ್ಯಕ್ಷ ವೈ ಸುಕುಮಾರ್  ಕೆಪಿಸಿಸಿ ಕೊರ್ಡಿನೇಟರ್ ನವೀನ್ ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಚಿರಿತ ಎಲ್‌ ಅಮೀನ್‌, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ ನಿಯಾಝ್, ವಿಶ್ವಾಸ್‌ ವಿ ಅಮೀನ್ ಗಣೇಶ್‌ ಕೋಟ್ಯಾನ್‌ ಪಡುಬಿದ್ರಿ, ಅಬ್ದುಲ್ ಅಝೀಜ್ ಪ್ರಭಾಕರ ಆಚಾರ್ಯ ರಮೀಜ್ ಎಂ. ಎಸ್ ಶಾಫಿ ಸುತೀಶ್ ದೇಜಡಿ ಹಸನ್ ಬಾವಾ ವಿ, ಜ್ಯೋತಿ ಮೆನನ್‌, ಕಾಪು ದಿವಾಕರ ಶೆಟ್ಟಿ ಮತ್ತು ಕಾಂಗ್ರೆಸ್  ಸದಸ್ಯರುಗಳು ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *