×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯ 12 ನೇ ವಾರ್ಷಿಕೋತ್ಸವದ ಪ್ರಯುಕ್ತ ತಾ.31.07.2025 ಗುರುವಾರ ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಜಿಲ್ಲಾಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮುಂಡ್ಕೂರು ದುರ್ಗ ಪರಮೇಶ್ವರಿ ದೇವಸ್ಥಾನದ ಮುಕ್ತೇಸರಾದ ಶ್ರೀ ಸುರೇಂದ್ರ ಶೆಟ್ಟಿ,ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಯಾಕೂಬ್ ಖಾದರ್ ಗುಲ್ವಾಡಿ,ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಶ್ರೀ ಫ್ರಾಂಕಿ ಡಿಸೋಜ,ಉಡುಪಿ ಜಿಲ್ಲಾಸ್ಪತ್ರೆ ಮುಖ್ಯಸ್ಥರಾದ ಡಾ. ವೀಣಾ ಕುಮಾರಿ ಉಪಸ್ಥಿತರಿರುವರು. ರಕ್ತದಾನಿಳಾದ ಶ್ರೀ ದಿಶಾನ್ ಪೂಜಾರಿ,ಶ್ರೀ ಶಾಂತರಾಮ್ ಮೊಗವೀರ,ಶ್ರೀ ಝಾಕೀರ್ ಹುಸೈನ್,ಶ್ರೀಮತಿ ವಿನುತಾ ಕಿರಣ್, ಶ್ರೀ ಶ್ರೀನಿವಾಸ್ ಪ್ರಸಾದ್ ಮಯ್ಯ,ಶ್ರೀ ಜಯರಾಜ್ ಸಾಲಿಯಾನ್,ಶ್ರೀ ಗುರುಚರಣ್ ಗಂಗೊಳ್ಳಿ,ಶ್ರೀ ನಿತ್ಯಾನಂದ್ ಅಮೀನ್,ಶ್ರೀ ಚೇತನ್ ಶಂಕರಪುರ,ಶ್ರೀ ಅಬ್ದುಲ್ ಹಮೀದ್ ಉಚ್ಚಿಲ ಇವರಿಗೆ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *