×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ಏಕ ವಿನ್ಯಾಸ ನಕ್ಷೆಯ (9/11) ಅವ್ಯವಸ್ಥೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗು ಒಬಿಸಿ ಮೋರ್ಚಾ ಜಂಟಿ ನೇತ್ರತ್ವದಲ್ಲಿ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು ಪ್ರತಿಭಟನೆ ಉದ್ದಟಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9/11, ಕೆಂಪು ಕಲ್ಲು, ಮರಳು ಹೀಗೆ ಅನೇಕ ಸಮಸ್ಯೆಗಳು ತಾಂಡವಾಡುತ್ತಿವೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಕಣ್ಣು, ಕಿವಿ ಸರಿ ಇಲ್ಲದಂತೆ ವರ್ತಿಸುತ್ತಿದೆ. ಇದು ಹೀಗೆ ಮುಂದುವರಿದರೆ ಸರಕಾರದ ಕಣ್ಣು ಮತ್ತು ಕಿವಿಯನ್ನು ಬಿಜೆಪಿ ಸರಿ ಮಾಡಬೇಕಾದ ಅನಿವಾರ್ಯತೆ ಬರಬಹುದು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ ಅವರು ಸರಕಾರವನ್ನು ಎಚ್ಚರಿಸ ಬೇಗು ಎನ್ನುವ ದೃಷ್ಟಿಯಿಂದ ಜಿಲ್ಲೆಯ 155 ಗ್ರಾಮ ಪಂಚಾಯತ್ ನ ಮುಂದೆ ಸರಣಿ ಧರಣಿ ಪ್ರತಿಭಟನೆ ಮಾಡಿ ಸರಕಾರವನ್ನು ಎಚ್ಚರಿಸುವಂತಹ ಕಾರ್ಯಕ್ರಮ ಮಾಡ್ದಿದ್ದೇವೆ ಜನರ ಸಮಸ್ಯೆಯನ್ನು ಅರಿತು ಪರಿಹಾರಕ್ಜೆ ಪ್ರಯತ್ನ ಪಡಿ ಜನರ ಜೀವನದಲ್ಲಿ ಚೆಲ್ಲಾಟ ಅಡಬೇಡಿ ಮುಂದಿನ 15 ದಿನದಲ್ಲಿ ಸಮಸ್ಯೆ ಅರಿತು ಪರಿಹಾರ ಕಂಡುಕೊಳ್ಳದಿದ್ದಲ್ಲಿ ಪ್ರಾಧಿಕಾರಕ್ಕೆ ಬೀಗ ಜಡಿಯುವ ಸಮಯ ದೂರವಿಲ್ಲ ಎಂದು ಹೇಳಿದರು ಈ ಸಂದರ್ಭದಲ್ಲಿ ಕಿರಣ್ ಕುಮಾರ್ ಕೊಡ್ಗಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರತ್ನಾಕರ ಹೆಗ್ಡೆ ಮಟ್ಟಾರು, ಉದಯಕುಮಾರ್ ಶೆಟ್ಟಿ, ಪ್ರಭಾಕರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು

Leave a Reply

Your email address will not be published. Required fields are marked *