ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಚತ್ತೀಸ್ ಗಡ್ ರಾಜ್ಯ ಸರಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ ಸೋಮವಾರ ಸಂಜೆ ಉಡುಪಿ ಅಜ್ಜರಕಾಡು ಹುತಾ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು, ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಚಿಂತಕರಾದ ಗಣನಾಥ್ ಎಕ್ಕಾರ್ ದೇಶದ ಸಂವಿಧಾನವು ಸರ್ವ ಜನಾಂಗದ ಜನತೆಗೆ ಎಲ್ಲಾ ರೀತಿಯ ಹಕ್ಕುಗಳನ್ನು ನೀಡಿದ್ದರೂ ಇಂದು ದ್ವೇಷ ರಾಜಕಾರಣದ ಭಾಗವಾಗಿ ಅಲ್ಪಸಂಖ್ಯಾತರನ್ನು ಗುರಿಯನ್ನಾಗಿಸಿ ದೇಶಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಲಾಗುತ್ತಿದೆ ಕ್ರೈಸ್ತರು ದೇಶದ ಅಭಿವೃದ್ಧಿಗೆ ಸ್ವಾತಂತ್ರ್ಯ ಪೂರ್ವದಿಂದಲೇ ತಮ್ಮ ಕೊಡುಗೆಯನ್ನು ನೀಡಿಕೊಂಡು ಬಂದಿದ್ದಾರೆ. ಸಾಹಿತ್ಯಕ್ಕೆ ಮೊದಲ ಕೊಡುಗೆ ನೀಡಿದ್ದು ಕೂಡ ಕ್ರೈಸ್ತ ಮಿಷನರಿಗಳಾಗಿ ಘಟನೆಯಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸವಾಗಿದ್ದು ಅದನ್ನು ಪ್ರತಿಯೊಬ್ಬ ಭಾರತೀಯ ಕೂಡ ಖಂಡಿಸಲೇ ಬೇಕಾಗಿದೆ. ಸಹೋದರತೆ ಮತ್ತು ಸಹಬಾಳ್ವೆ ಸಂವಿಧಾನದ ಮೂಲ ತತ್ವವಾಗಿದ್ದು, ಅದಕ್ಕೆ ಧಕ್ಕೆ ಬಂದಾಗ ದೇಶ ಪ್ರಗತಿಯನ್ನು ಕಾಣಲು ಸಾಧ್ಯವಿಲ್ಲ. ದೇಶದಾದ್ಯಂತ 30000ಕ್ಕೂ ಅಧಿಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಂದ್ದು 50ಲಕ್ಷ ಜನರು ಅವುಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಅದರಲ್ಲಿ 48ಲಕ್ಷ ಮಂದಿ ಪ್ರಯೋಜನ ಪಡೆಯುವವರು ಇತರ ಧರ್ಮದವರಾಗಿದ್ದಾರೆ.ಎಂದರು

ಪತ್ರಕರ್ತೆ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್ ಮಾತನಾಡಿ ಮತಾಂತರದ ಹೆಸರಿನಲ್ಲಿ ಕ್ರೈಸ್ತ ಸಮುದಾಯವನ್ನು ಗುರಿಯನ್ನಾಗಿಸಿ ನಡೆಸುತ್ತಿರುವ ಧಾಳಿ ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ ಶಾಂತಿಯಿಂದ ಯಾವುದೇ ಹೋರಾಟವನ್ನು ಗೆಲ್ಲಲು ಸಾಧ್ಯವಿದೆ ಎಂದು ತೋರಿಸಿಕೊಟ್ಟವರು ಗಾಂಧಿಜಿ. ಬೇಟಿ ಪಡಾವೋ ಬೇಟಿ ಬಚಾವೊ ಎನ್ನುವವರು ಇಂದು ಕ್ರೈಸ್ತ ಧರ್ಮಭಗಿನಿಯರ ನೋವಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕಾಗಿದೆ. ಶಾಂತಿಯನ್ನು ಜಪಿಸಿದ ಕ್ರೈಸ್ತ ಸಮುದಾಯಕ್ಕೆ ಮಾಡಿದ ಹಿಂಸೆ ಖಂಡನೀಯಪ್ರತಿಭಟನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಥೊಲಿಕ್ ಸಭಾ ಉಡುಪಿ ಪ್ರದೇಶದ ಅಧ್ಯಕ್ಷರಾದ ರೊನಾಲ್ಡ್ ಆಲ್ವೇಡಾ ಬಂಧಿತ ಧರ್ಮಭಗಿನಿಯರನ್ನು ಷರತ್ತುಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ ಆದರೆ ಅವರ ಮೇಲೆ ಹಾಕಲಾಗಿರುವ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆದಿಲ್ಲ. ಅಲ್ಲದೆ ಧರ್ಮಭಗಿನಿಯರನ್ನು ಛತ್ತೀಸ್ ಘಡದ ದುರ್ಗ ರೈಲು ನಿಲ್ದಾಣದಲ್ಲಿ ಬಲಪಂಥೀಯ ಸಂಘಟನೆಗಳು ಅಮಾನವೀಯವಾಗಿ ನಡೆಸಿಕೊಂಡಿದ್ದು ಆ ಸಂಘಟನೆಗಳ ವಿರುದ್ದ ಕೂಡ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ. ಇದೊಂದು ಕೇವಲ ಕಣ್ಮರೆಸುವ ತಂತ್ರವಾಗಿದ್ದು ಕ್ರೈಸ್ತ ಸಮುದಾಯದ ಬೇಡಿಕೆಗಳಿಗೆ ಛತ್ತೀಸ್ ಘಡದ ರಾಜ ಸರಕಾರ ಹಾಗೂ ಕೇಂದ್ರ ಸರಕಾರ ಸೂಕ್ತವಾಗಿ ಸ್ಪಂದಿಸಬೇಕು ಎನ್ನುವ ನಿಟ್ಟಿನಲ್ಲಿ ನಮ್ಮ ಇಂದಿನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಕುಲಪತಿ ವಂ।ಸ್ಟೀಫನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಡೆನಿಸ್ ಡೆಸಾ, ಧಾರ್ಮಿಕ ಗುರುಗಳ ಎಪಿಸ್ಕೋಪಲ್ ವಿಕಾರ್ ವಂ|ಜ್ಯೋ ತಾವೊ, ಸಹಬಾಳ್ವೆಯ ಪ್ರೋ. ಫಣಿರಾಜ್, ಭಾರತೀಯ ಕಥೊಲಿಕ್ ಯುವ ಸಂಚಾಲನ ಉಡುಪಿ ಧರ್ಮಪ್ರಾಂತ್ಯದ ಅಧ್ಯಕ್ಷರಾದ ನಿತಿನ್ ಬಾರೆಟ್ರೊ ಕಥೊಲಿಕ್ ಸಭಾ ಕಾರ್ಯದರ್ಶಿ ಜೊಯೆಲ್, ಬ್ರಹ್ಮಾವರ ಸಿರಿಯನ್ ಒರ್ದೊಡಕ್ಸ್ ಸಭೆಯ ವಿಕಾರ್ ಜನರಲ್ ವಂ| ಎಮ್ ಸಿ ಮಥಾಯಿ ಕರ್ನಾಟಕ ಸದರ್ನ್ ಡಯಾಸಿಸ್ ಉಡುಪಿ ಎರಿಯಾ ಚೇರಮೆನ್ ಪಾಸ್ಟರ್ ಕಿಶೋರ್, ವಿವಿಧ ಸಭೆಗಳ ಧರ್ಮಗುರುಗಳು, ಧರ್ಮಭಗಿನಿಯರು, ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕ್ರೈಸ್ತ ಬಂಧುಗಳು ಉಪಸ್ಥಿತರಿದ್ದರು.ಪ್ರತಿಭಟನೆಯಲ್ಲಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಿಂದ ಸಂಗ್ರಹಿಸಿದ ಸಹಿಗಳ ಮೂಲಕ ದೇಶದ ರಾಷ್ಟ್ರಪತಿಗಳಿಗೆ, ಪ್ರಧಾನ ಮಂತ್ರಿಗಳಿಗೆ, ಛತ್ತೀಸ್ ಘಡದ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು ಪ್ರಮುಖ ಬೇಡಿಕೆಗಳು ಧರ್ಮಭಗಿನಿಯರ ಮೇಲೆ ಹೇರಲಾದ ಎಲ್ಲಾ ಕೇಸುಗಳನ್ನು ರದ್ದುಗೊಳಿಸಬೇಕು. ಬಲಪಂಥೀಯ ಸಂಘಟನೆಗಳಿಂದ ನಡೆದ ದೌರ್ಜನ್ಯದ ಕುರಿತು ಸೂಕ್ತವಾದ ತನಿಖೆ ನಡೆಸಬೇಕು ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ಸೂ ಭದ್ರತೆಯನ್ನು ಒದಗಿಸಬೇಕು. ಅಲ್ಪ ಸಂಖ್ಯಾತರ ಮಾನವ ಹಕ್ಕು ಹಾಗೂ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ನಿಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

