×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್‌ನೇಮಕ

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಹರೀಶ್ ಕಿಣಿ ಅವರು ಈ ಹಿಂದೆ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಹಾಗೂ ಉಡುಪಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *