×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ನಮಿತಿಯ ಪದಗ್ರಹಣ ಸಮಾರಂಭ 50ನೇ ವಾರ್ಷಿಕ ಸಮಾವೇಶ

ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್‌ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ನಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು ಅವರು ಮಾತನಾಡಿ: ಬಿಜೆಪಿಯ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯಿತು. ಇದಕ್ಕೆ ಕಾರಣ ಮತಗಳ್ಳತನ. ಮುಂದೆ ನಡೆಯುವ ಬಿಹಾರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಸೋಲಿಸುವ ಸಲುವಾಗಿ ಈಗಾಗಲೇ 85 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ. ಕೈಬಿಟ್ಟ ಮತದಾರರ ಪಟ್ಟಿಯನ್ನು ನೀಡದೆ, ಚುನಾವಣಾ ಆಯೋಗ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿದೆ ಎಂದು ಸಚಿವರು ಆರೋಪಿಸಿದರು.ಬಹಳಷ್ಟು ಯುವಕರಿಗೆ ತಮ್ಮ ಶಕ್ತಿಯ ಅರಿವಿಲ್ಲ. ಯಾರೋ ಮಾಡುವ ಟೀಕೆಗಳಿಗೆ ಹೆದರಬಾರದು ನಿಮ್ಮ ಏರಿಯಾ, ಬೂತ್ ಮಟ್ಟದಲ್ಲಿ ನೀವು ಪ್ರಬಲವಾಗಿ ಬೆಳೆಯಬೇಕು. ನೀವು ಮಾಡುವ ಕೆಲಸಗಳು ಜನರ ಮನಸ್ಸನ್ನು ಗೆಲ್ಲಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಮಾರಂಭದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧ್ಯಕ್ಷರಾದ ಅಶೋಕ್ ಕೊಡವೂರ್, ಎಂ.ಎ. ಗಫೂರ್, ಹರಿಪ್ರಸಾದ್ ರೈ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ಕಿಶನ್ ಶೆಟ್ಟಿ, ಹರೀಶ್ ಕಿಣಿ, ದೀಪಕ್ ಕೊಟ್ಯಾನ್, ಭುಜಂಗ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *