ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ರವರು ಇಂದು ಸಂಜೆ ಉಡುಪಿ ಪುತ್ತಿಗೆ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಕಿನ್ನಿಮೂಲ್ಕಿ ಕನ್ನರ್ಪಾಡಿ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಸೆಪ್ಟೆಂಬರ್ 7 ತಾರೀಕಿನ ತನಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಸೆಪ್ಟೆಂಬರ್ 7 ರಂದು ನಡೆಸುವ ಭವ್ಯವಾದ ಗಣಪತಿ ವಿಸರ್ಜನಾ ಮೆರವಣಿಗೆಗೆ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಚಾಲನೆ ನೀಡಲಿದ್ದಾರೆ ಎಂದು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಜಯಕರ ಸೇರಿಗಾರ್,ಉಪಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ ಕಾರ್ಯದರ್ಶಿ ನವೀನ್ ಶೆಟ್ಟಿ ತಿಳಿಸಿದ್ದಾರೆ

