ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮುಂಡ್ಕೂರು ಪದವಿ ಪೂರ್ವ ಕಾಲೇಜಿನ ಶಿಕ್ಷಕರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿಯವರು ಭಾಗವಹಿಸಿ, ಶಿಕ್ಷಕರು ಮಕ್ಕಳ ಜೊತೆ ಪ್ರೀತಿಯಿಂದ ವ್ಯವಹರಿಸಿ, ಅವರ ಮನಸ್ಸಿನೊಳಗೆ ಸ್ಥಿರವಾಗಿ ನಿಲ್ಲುವವರಾಗಬೇಕು, ಆಗ ಅವರು ಪಾಠ – ಪಾಠೇತರ ವಿಷಯಗಳಲ್ಲಿ ಪ್ರತಿಭಾನ್ವಿತರಾಗಿ ಮೂಡಿಬರುತ್ತಾರೆ, ಶಿಕ್ಷಕ ವೃತ್ತಿ ಉಳಿದೆಲ್ಲವುಗಳಿಗಿಂತ ಮಿಗಿಲು, ಹಾಗಾಗಿ ಶಿಕ್ಷಕರು ಯಾವಾಗಲೂ ಕ್ರಿಯಾಶೀಲರಾಗಬೇಕೆಂಬ ಸಂದೇಶ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಸಂಚಾಲಕರಾದ ಡಾ|| ಕೆ. ಪ್ರಶಾಂತ್ ಶೆಟ್ಟಿಯವರು ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹಿರಿದು, ಹಲವು ವರ್ಷಗಳಿಂದ ಮಕ್ಕಳ ಏಳಿಗೆಗಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ಮತ್ತು ನೆನಪಿನ ಕಾಣಿಕೆಗಳನ್ನು ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಹುಸೇನಬ್ಬ ಮತ್ತು ಶಕುಂತಳ ವಿತರಿಸಿದರು.
ಸಮಾರಂಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ, ಸದಸ್ಯೆ ಪನ್ನಾ ಪಿ. ಶೆಟ್ಟಿ, ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಶಿವಣ್ಣ ಬಾಯರ್, ಕನ್ನಡ ಮಾಧ್ಯಮದ ಮುಖ್ಯಸ್ಥೆ ಕೃಪಾ ಅಮ್ಮನ್ನ ಹಾಗೂ ಸಮಿತಿಯ ಪದಾಧಿಕಾರಿಗಳು, ಶಿಕ್ಷಕ – ಶಿಕ್ಷಕೇತರರು ಉಪಸ್ಥಿತರಿದ್ದರು.
ಪ್ರಾಂಶುಪಾಲ ನೀಲಾನಂದ್ ನಾಯ್ಕ್ ಸ್ವಾಗತಿಸಿದರು, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಗೇಬ್ರಿಯಲ್ ಮಸ್ಕರೇನ್ಹಸ್ ವಂದಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ದೇವಾಡಿಗ ಕಲ್ಯಾ ನಿರೂಪಿಸಿದರು.

