×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ: ಸಂಸ್ಕೃತ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ

ಸಂಸ್ಕೃತ ಭಾರತಿ ಉಡುಪಿ ಇದರ ಪ್ರಾಯೋಜಕತ್ವದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ, ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಕುಮಾರಿ ಇಷಿಕಾ ಶೆಟ್ಟಿ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಜಿಲ್ಲೆಯ 25 ಶಾಲೆಗಳ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ರೂ. 3000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಪಡೆದಿರುತ್ತಾಳೆ.ಸಂಸ್ಕೃತ ದಲ್ಲಿ ವಿಶೇಷ ಸಾಧನೆಯನ್ನು ಮಾಡಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಮತ್ತು ಸಂಸ್ಕೃತ ಶಿಕ್ಷಕಿ ಶಕುಂತಳಾ ಆರ್ ಶೆಣೈ ಇವರನ್ನು ಸಂಚಾಲಕರಾದ ಡಾ|| ಕೆ. ಪ್ರಶಾಂತ್ ಶೆಟ್ಟಿಯವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ನೀಲಾನಂದ್ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *