ರಾಜ್ಯ ಸರಕಾರ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಕಳದಲ್ಲಿ ಪ್ರಾರಂಭವಾಗಿದ್ದು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತ್ತಿದೆ. ಶಾಲಾ ಶಿಕ್ಷಕರು ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಮಾಹಿತಿ ಸಂಗ್ರಹಿಸುತ್ತಿದ್ದು ಯಾವುದೇ ಗೊಂದಲಗಳಿಲ್ಲದೆ ತಮ್ಮ ಸೇವೆಯಲ್ಲಿ ಮುಂದುವರೆಯುತ್ತಿರುವುದು ಕಂಡು ಬಂದಿದೆ.
ಈ ಸಮೀಕ್ಷೆಯು ರಾಜ್ಯದ ಎಲ್ಲಾ ಸಮುದಾಯದ ಅಭಿವೃದ್ಧಿ ಸಹಕಾರಿಯಾಗಲಿದ್ದು ಸಮೀಕ್ಷೆಯ ಸಂದರ್ಭದಲ್ಲಿ ಕೇಳುವ ಸರಳ ಪ್ರಶ್ನೆಗಳಿಗೆ ಜನತೆ ಸೂಕ್ತ ಮಾಹಿತಿಯನ್ನು ಯಾವುದೇ ಅಂಜಿಕೆ ಇಲ್ಲದೆ ನೀಡುವ ಮೂಲಕ ಸರಕಾರದ ಈ ಜನಗಣತಿಗೆ ಬೆಂಬಲಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮನವಿ ಮಾಡಿದ್ದಾರೆ

