×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ – ಉಚ್ಚಿಲ ದಸರಾ ವಿದ್ಯುಕ್ತ ಚಾಲನೆ

 ಉಚ್ಚಿಲ : ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ ಇದರ  ವರ್ಣರಂಜಿತ ಶೋಭಾಯಾತ್ರೆಗೆ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ವಿದ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭ ಗಣ್ಯರು ಮತ್ತು ದ್ರೋಣ್‌ ಮೂಲಕ ಶಾರದೆ ಮತ್ತು ನವದುರ್ಗೆಯರ ಮೃಣ್ಮಯ ಮೂರ್ತಿಗೆ ಪುಷ್ಪ ಸಿಂಚನ ಮಾಡಲಾಯಿತು.

60 ಕ್ಕೂ ಅಧಿಕ ಟ್ಯಾಬ್ಲೋಗಳು ಶೋಭಾಯಾತ್ರೆಗೆ ರಂಗು ತಂದಿದೆ. ನೂರಾರು ಜನರು ರಾಹೆ 66 ಇಕ್ಕಡೆಗಳಲ್ಲಿ ಇಂದು ಶೋಭಾ ಯಾತ್ರೆ ವೀಕ್ಷಿಸುತ್ತಿರುವುದು ಕಂಡು ಬಂದಿದೆ.

 ಈ ಸಂದರ್ಭ ಈ ಸಂದರ್ಭ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್‌ ಎರ್ಮಾಳು, ಕಾರ್ಯದರ್ಶಿ ಶರಣ್‌ಕುಮಾರ್‌ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ  ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್‌, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *