×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಬಂಟರ ಸಂಘ : ಅ. 5 ರಂದು ಸಿರಿಮುಡಿ ದತ್ತಿನಿಧಿ, ಸಿರಿಮುಡಿ ಸೊಸೈಟಿ ಉದ್ಘಾಟನೆ.

ಪಡುಬಿದ್ರಿ, ಅ.1- ಬಂಟರ ಸಂಘ (ರಿ.)ಪಡುಬಿದ್ರಿ, ಬಂಟ್ಸ್ ವೆಲ್ವೇರ್ ಟ್ರಸ್ಟ್ (ರಿ.) ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿ ನಿಧಿ ಸೋಶಿಯಲ್ ವೆಲ್ವೇರ್ ಟ್ರಸ್ಟ್ (ರಿ.) ಪಡುಬಿದ್ರಿ ಇದರ ಸಹಭಾಗಿತ್ವದಲ್ಲಿ ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ, ವಿಶಿಷ್ಟ ಚೇತನರಿಗೆ, ಅಶಕ್ತರಿಗೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಧನ ವಿತರಣೆ, ದಾನಿಗಳಿಗೆ ಸನ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯತೆಗಳನ್ನೊಳಗೊಂಡ ಸಿರಿಮುಡಿ ದತ್ತಿ ನಿಧಿ ವಿತರಣಾ ಸಮಾರಂಭಹಾಗೂ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಪಡುಬಿದ್ರಿ ಇದರ ಉದ್ಘಾಟನಾ ಸಮಾರಂಭ ಅ. 5, ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಪಡುಬಿದ್ರಿ ಬಂಟರ ಭವನದ ದಿ. ರಮೇಶ್ ಮಹಾಬಲ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪುರವರು ತಿಳಿಸಿದ್ದಾರೆ. ಅವರು ಬುಧವಾರ ಬೆಳಿಗ್ಗೆ ಪಡುಬಿದ್ರಿ ಬಂಟರ ಸಂಘದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಂಟ ಸಮಾಜ ಹಾಗೂ ಇತರ ಸಮಾಜಗಳ ಆರ್ಥಿಕ ಸಬಲೀಕರಣಕ್ಕಾಗಿ ಗ್ರಾಹಕ ಸ್ನೇಹಿ ಬ್ಯಾಂಕ್ ರೂಪಿಸಬೇಕು ಎನ್ನುವ ಸಾಮಾಜಿಕ ಕಳಕಳಿಯ ಹಂಬಲವನ್ನು ಹೊಂದಿ ಸುಮಾರು 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ತನ್ನದೇ ಆದ ಸ್ವಂತ ಕಟ್ಟಡದಲ್ಲಿ ಸಂಪೂರ್ಣ ಹವಾ ನಿಯಂತ್ರಿತ ವ್ಯವಸ್ಥೆಯೊಂದಿಗೆ ಕಾರ್ಯಾಚರಿಸಲು ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಸಿದ್ದವಾಗಿದೆ. ಬಂಟ ಸಮಾಜದ ಉದ್ಯಮಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸದಾನಂದ ಕೆ.ಶೆಟ್ಟಿಯವರು ಸೊಸೈಟಿ ಸ್ಥಾಪನೆಯಲ್ಲಿ ಮಹತ್ವದ ಸಹಕಾರವನ್ನು ನೀಡಿದ್ದಾರೆ. ಸಂಪೂರ್ಣ ಹವಾ ನಿಯಂತ್ರಿತ ಕಟ್ಟಡದಲ್ಲಿ ಕಾರ್ಯಾಚರಿಸಲಿದೆ. ಜೊತೆಗೆ ಸೇಫ್ ಲಾಕ‌ರ್ ಸೌಲಭ್ಯವನ್ನು ಕೂಡ ಹೊಂದಿದೆ. ಬ್ಯಾಂಕಿನ ಕಟ್ಟಡವು ‘ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ’ ಎಂಬ ನಾಮಾಂಕಿತವನ್ನು ಹೊಂದಿದೆ. ಇದು ಬಂಟರ ಸಂಘಗಳ ಇತಿಹಾಸದಲ್ಲಿಯೇ ಪ್ರಥಮವಾಗಿ ಸ್ವಂತ ಕಟ್ಟಡವನ್ನು ಹೊಂದಿದ ಕೋ-ಅಪರೇಟಿವ್ ಸೊಸೈಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು. ಅ. 5ರಂದು ಬಂಟರ ಮಾಹಿತಿ ಕೈಪಿಡಿಯ ಬಿಡುಗಡೆ, ಸಂಗೀತ ರಸದೌತಣ, ಪಡುಬಿದ್ರಿ, ಬಂಟರ ಸಂಘದ ಸದಸ್ಯರಿಂದ ಮನರಂಜನೆಯೂ ಇರಲಿದೆ. ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಉದ್ಘಾಟನೆಯನ್ನು ‘ಸಹಕಾರ ರತ್ನ’ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರು ನೆರವೇರಿಸಲಿದ್ದಾರೆ. ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣವನ್ನು ಉದ್ಯಮಿ ಸದಾನಂದ ಕೆ. ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮದ ಉದ್ಘಾಟನೆಯನ್ನು ಎಂ.ಆರ್.ಜಿ. ಗ್ರೂಪ್‌ನ ಆಡಳಿತ ನಿರ್ದೇಶಕ ಡಾ. ಕೆ. ಪ್ರಕಾಶ್ ಶೆಟ್ಟಿಯವರು ನೆರವೇರಿಸಲಿದ್ದಾರೆ. ಸಿರಿಮುಡಿ ಉಳಿತಾಯ ಖಾತೆಯ ಪಾಸ್ ಪುಸ್ತಕದ ವಿತರಣೆಯನ್ನು ಹೇರಂಭ ಗ್ರೂಪ್‌ನ ಆಡಳಿತ ನಿರ್ದೇಶಕರಾದ ಡಾ. ಕನ್ಯಾನ ಸದಾಶಿವ ಬಂಟ ಸಮಾಜದ ಉದ್ಯಮಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸದಾನಂದ ಕೆ.ಶೆಟ್ಟಿಯವರು ಸೊಸೈಟಿ ಸ್ಥಾಪನೆಯಲ್ಲಿ ಮಹತ್ವದ ಸಹಕಾರವನ್ನು ನೀಡಿದ್ದಾರೆ. ಸಂಪೂರ್ಣ ಹವಾ ನಿಯಂತ್ರಿತ ಕಟ್ಟಡದಲ್ಲಿ ಕಾರ್ಯಾಚರಿಸಲಿದೆ. ಜೊತೆಗೆ ಸೇಫ್ ಲಾಕ‌ರ್ ಸೌಲಭ್ಯವನ್ನು ಕೂಡ ಹೊಂದಿದೆ. ಬ್ಯಾಂಕಿನ ಕಟ್ಟಡವು ‘ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ’ ಎಂಬ ನಾಮಾಂಕಿತವನ್ನು ಹೊಂದಿದೆ. ಇದು ಬಂಟರ ಸಂಘಗಳ ಇತಿಹಾಸದಲ್ಲಿಯೇ ಪ್ರಥಮವಾಗಿ ಸ್ವಂತ ಕಟ್ಟಡವನ್ನು ಹೊಂದಿದ ಕೋ-ಅಪರೇಟಿವ್ ಸೊಸೈಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು. ಅ. 5ರಂದು ಬಂಟರ ಮಾಹಿತಿ ಕೈಪಿಡಿಯ ಬಿಡುಗಡೆ, ಸಂಗೀತ ರಸದೌತಣ, ಪಡುಬಿದ್ರಿ, ಬಂಟರ ಸಂಘದ ಸದಸ್ಯರಿಂದ ಮನರಂಜನೆಯೂ ಇರಲಿದೆ. ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಉದ್ಘಾಟನೆಯನ್ನು ‘ಸಹಕಾರ ರತ್ನ’ ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರು ನೆರವೇರಿಸಲಿದ್ದಾರೆ. ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣವನ್ನು ಉದ್ಯಮಿ ಸದಾನಂದ ಕೆ. ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮದ ಉದ್ಘಾಟನೆಯನ್ನು ಎಂ.ಆರ್.ಜಿ. ಗ್ರೂಪ್‌ನ ಆಡಳಿತ ನಿರ್ದೇಶಕ ಡಾ. ಕೆ. ಪ್ರಕಾಶ್ ಶೆಟ್ಟಿಯವರು ನೆರವೇರಿಸಲಿದ್ದಾರೆ. ಸಿರಿಮುಡಿ ಉಳಿತಾಯ ಖಾತೆಯ ಪಾಸ್ ಪುಸ್ತಕದ ವಿತರಣೆಯನ್ನು ಹೇರಂಭ ಗ್ರೂಪ್‌ನ ಆಡಳಿತ ನಿರ್ದೇಶಕರಾದ ಡಾ. ಕನ್ಯಾನ ಸದಾಶಿವ ಶೆಟ್ಟಿಯವರುಪಡುಬಿದ್ರಿ, ಬಂಟರ ಸಂಘದ ಪೂರ್ವಾಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿಯವರ ವಿಶೇಷ ಮುತುವರ್ಜಿಯಿಂದ ಸಂಘದ ಸದಸ್ಯರಿಗೆ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಿದ ಸಿರಿಮುಡಿ ದತ್ತಿನಿಧಿ ಅವರ ಪರಿಶ್ರಮದಿಂದ 1. 31 ಕೋಟಿ ರೂ. ಬ್ಯಾಂಕ್‌ನಲ್ಲಿ ಠೇವಣಿಯಾಗಿರಿಸಿ, ಪ್ರತೀವರ್ಷ ಅದರ ಬಡ್ಡಿಯಿಂದ ಆರ್ಥಿಕ ಸಹಕಾರವನ್ನು ನೀಡಲಾಗುತ್ತಿದೆ. ಪ್ರಸ್ತುತ ವರ್ಷ ಸುಮಾರು 17 ಲಕ್ಷ ರೂಪಾಯಿಗಳ ಸಹಾಯಧನ ವಿತರಣೆ ನಡೆಯಲಿದೆ.

ದೋಸ್ತಿಯೇ ಎನ್ನ ಆಸ್ತಿ- ಆಸ್ತಿಯೇ ಎನ್ನ ದೋಸ್ತಿ ಎನ್ನುವ ಸಾಂತೂರು ಭಾಸ್ಕರ ಶೆಟ್ಟಿಯವರ ಸಮಾಜ ಮುಖಿ ಜೀವನ, ಪಡುಬಿದ್ರಿ ಮತ್ತು ಬೆಳಗಾವಿ ಬಂಟರ ಸಂಘದ ಅಧ್ಯಕ್ಷರಾಗಿ, ಬೆಳಗಾವಿ ಮಹಾ ನಗರ ಪಾಲಿಕೆಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಭಾಸ್ಕರ ಶೆಟ್ಟಿಯವರು, ಸಿರಿಮುಡಿ ದತ್ತಿ ನಿಧಿಗಾಗಿ ಅವಿಶ್ರಾಂತವಾಗಿ ದುಡಿದು ಈಗಾಗಲೇ ಒಬ್ಬಂಟಿಯಾಗಿ ಒಂದು ಕೋಟಿ ರೂ. ಗೂ ಅಧಿಕ ಹಣವನ್ನು ಸಂಗ್ರಹಿಸಿ ನಿಖರ ಠೇವಣಿಯನ್ನಿರಿದ್ದಾರೆ. ಮುಂದೆ ಅದನ್ನು ಎರಡು ಕೋಟಿಗೆ ವಿಸ್ತರಿಸುವ ಯೋಜನೆಯನ್ನೂ ಹಾಕಿ ಕೊಂಡಿದ್ದಾರೆ. ಈ ದೇಣಿಗೆಯಲ್ಲಿ ಮುಂಬಯಿ, ಪುಣೆಯ ಸಿಂಹಪಾಲಿದೆ ಎನ್ನುವುದನ್ನು ಹೇಳಲು ಭಾಸ್ಕರ ಶೆಟ್ಟಿಯವರು ಮರೆತಿಲ್ಲ.ಮಾಡಲಿದ್ದಾರೆ. ವಿ.ಕೆ. ಗ್ರೂಪ್ ಆಡಳಿತ ನಿರ್ದೇಶಕ ಕೆ.ಎಂ.ಶೆಟ್ಟಿಯವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಪುಣೆ ಬಂಟರ ಸಂಘದ ಅಧ್ಯಕ್ಷರಾದ ಅಜಿತ್ ಹೆಗ್ಡೆಯವರು ಸವಲತ್ತುಗಳ ವಿತರಣೆ ಮಾಡಲಿದ್ದಾರೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ.ದೇವಿಪ್ರಸಾದ್ ಶೆಟ್ಟಿಯವರು ವಹಿಸಲಿದ್ದಾರೆ.

Leave a Reply

Your email address will not be published. Required fields are marked *