×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜಿಲ್ಲಾ ಬಿಜೆಪಿ ನೂತನ ಕಟ್ಟಡ ಶಿಲಾನ್ಯಾಸ ನೆರವೇರಿಸಿದ ಬಿ.ಎಲ್ ಸಂತೋಷ್

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸ ಹಾಗೂ ಕಾರ್ಯಕರ್ತರ ಸಮಾವೇಶ ಇಂದು ಉಡುಪಿಯ ಗುಂಡಿಬೈಲುವಿನಲ್ಲಿ ನಡೆಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಲಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕ‌ರ್ ಹೆಗ್ಡೆ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *