
ಬೆಂಗಳೂರು: ಮಳೆಯಿಂದ ಕಾರು ಟ್ರಾಫಿಕ್‍ನಲ್ಲಿ ಸಿಲುಕಿಕೊಂಡು ಡಾಕ್ಟರ್ (Doctor) ಒಬ್ಬರು 3 ಕಿ.ಮೀ ಓಡಿಕೊಂಡು ಆಸ್ಪತ್ರೆಗೆ (Hospital) ತೆರಳಿ ರೋಗಿಗೆ ಶಸ್ತ್ರಚಿಕಿತ್ಸೆ (Surgery) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಟ್ರಾಫಿಕ್‍ನಲ್ಲಿ ಸಿಲುಕಿದ್ದ ಡಾ. ಗೋವಿಂದ ನಂದಕುಮಾರ್ ಬೆಂಗಳೂರಿನ ಸರ್ಜಾಪುರದ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital) ಸರ್ಜನ್ ಆಗಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ರೋಗಿಗೆ ಚಿಕಿತ್ಸೆ ಸಿಗಬೇಕು ಎಂದು ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟು ಓಡಿ ಶಸ್ತ್ರಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

