ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯು ಅಕ್ಟೋಬರ್ 7 ರಂದು ಉಡುಪಿಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರ ಮೇಲೆ ಶೂ ಎಸೆದ ಘಟನೆ ತೀವ್ರ ಖಂಡನೀಯ.ಮುಂದೆ ಇಂತಹ ಸಂವಿಧಾನ ವಿರೋಧಿ ಕೃತ್ಯ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ ಮತಗಳ್ಳತನ ಬಗ್ಗೆ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಿ ಸಹಿ ಸಂಗ್ರಹ ಅಭಿಯಾನ ನಡೆಸುವಂತೆ ಸೂಚಿಸಿದರು. ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ಮುಂಬರುವ ಸ್ಥಳೀಯಾಡಳಿತದ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸರ್ವ ಸಿದ್ದತೆಯನ್ನು ಮಾಡಿಕೊಳ್ಳುವ ಬಗ್ಗೆ ತಿಳಿಸಿದರು.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ,ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಮಂಚಿ ಸ್ವಾಗತಿಸಿದರು.ಭರತ್ ಮಣಿಪಾಲ ವಂದಿಸಿದರು.

