ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು , ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ.,ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ., ಉಡುಪಿ, ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ನಿ., ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ
ಗಾಂಧಿ ಜಯಂತಿಯ ಪ್ರಯುಕ್ತ ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಶ್ರೀಯುತ. ಬಿ ಜಯಕರ ಶೆಟ್ಟಿ ಇಂದ್ರಾಳಿ ಇವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು

. ಈ ಸಂದರ್ಭದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ಇದರ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರಾದ ಶ್ರೀ. ರಾಜೇಶ್ ಶೇರಿಗಾರ್, ಉಡುಪಿ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕರಾದ ಶ್ರೀ.ರಾಜೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ. ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು. ಸಂಯುಕ್ತ ಸಂಸ್ಥೆ ಗಳ ಸಿಬ್ಬಂದಿ ವರ್ಗದವರು . ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

