×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲಾ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ -ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು, ಪೆಟ್ರೋಲ್, ಡೀಸೆಲ್ ಸೆಸ್ 1 ರೂ. ಕಾರ್ಮಿಕ ಇಲಾಖೆಗೆ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಆ ಮೂಲಕ ಸಂಗ್ರಹವಾಗುವ 2500 ಕೋಟಿ ಮೊತ್ತದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ 10-15 ಲಕ್ಷ ರೂ. ಹೆಲ್ತ್ ಕಾರ್ಡ್ ಸೌಲಭ್ಯ ನೀಡಲು ಚಿಂತನೆ ಮಾಡಲಾಗಿದೆ ಎಂದರು.ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಬಿಲ್‌ಗಳನ್ನು ತಂದಿದ್ದು, ಕಾರ್ಮಿಕರ ಅನುಕೂಲತೆಗೆ ತಕ್ಕಂತೆ ನಿಯಾಮಾವಳಿಯನ್ನು ರೂಪಿಸಲಾಗುತ್ತದೆ. ಸಿನೆಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಬಿಲ್ ತರಲಾಗಿದೆ. ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾ ದೀಪ ಯೋಜನೆ)ಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಪ್ರಸ್ತುತ 21 ಸಾವಿರ ರೂ. ವೇತನ ಪಡೆಯುವ ಉದ್ಯೋಗಿಗಳಷ್ಟೇ ಇಎಸ್‌ಐ ಸೌಲಭ್ಯದಡಿಯಲ್ಲಿ ಬರುತ್ತಿದ್ದು, 30 ಸಾವಿರ ರೂ. ವರೆಗೂ ವೇತನ ಪಡೆಯುವವರನ್ನು ಇಎಸ್‌ಐ ಯೋಜನೆಗೆ ತರುವುದಕ್ಕೆ 8 ತಿಂಗಳ ಹಿಂದೆಯೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದರು. ಪ್ರಸ್ತುತ 21 ಸಾವಿರ ರೂ. ವೇತನ ಪಡೆಯುವ ಉದ್ಯೋಗಿಗಳಷ್ಟೇ ಇಎಸ್‌ಐ ಸೌಲಭ್ಯದಡಿಯಲ್ಲಿ ಬರುತ್ತಿದ್ದು, 30 ಸಾವಿರ ರೂ. ವರೆಗೂ ವೇತನ ಪಡೆಯುವವರನ್ನು ಇಎಸ್‌ಐ ಯೋಜನೆಗೆ ತರುವುದಕ್ಕೆ 8 ತಿಂಗಳ ಹಿಂದೆಯೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಚೆಕ್ ವಿತಾರಿಸಲಾಯಿತು

ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿದರು. ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಮಿಕ ಆಯುಕ್ತ ಹಾಗೂ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ದಿನಕರ ಹೇರೂರು, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಉದಯ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ಲಾವಣ್ಯ ಬಲ್ಲಾಳ್, ಟಿ.ಎಂ. ಶಾಹೀದ್ ತೆಕ್ಕಿಲ್, ಮುಂಡರಗಿ ನಾಗರಾಜ್, ಕಾರ್ಮಿಕ ಅಕಾರಿಗಳಾದ ಕಮಲ್ ಷಾ ಅಲ್ತಾಫ್ ಅಹ್ಮದ್, ಕಾರ್ಮಿಕ ನಿರೀಕ್ಷಕರಾದ ಸಂಜಯ್, ಮಲ್ಲಿಕ್ ಪ್ರಸಾದ್, ನವೀನ್, ವಿಜಯೇಂದ್ರ ಸಹಿತ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *