×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ.

ಭಾವಿ ಪರ್ಯಾಯ ಶ್ರೀ ಶಿರೂರು ಮಠ ಸ್ವಾಗತ ಸಮಿತಿಯ ಪದಾಧಿಕಾರಿಗಳು ಸ್ವಾಗತ ಸಮಿತಿ ಗೌರವ ಅಧ್ಯಕ್ಷ ರಾಜಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಈ ವರೆಗೆ ನಡೆದ ಸಿದ್ಧತೆ ಹಾಗು ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಿದರು.

ಪರ್ಯಾಯ ಸ್ವಾಗತ ಸಮಿತಿ ಆಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವವನ್ನು ಶ್ರೀಕೃಷ್ಣ ದೇವರ ಭಕ್ತರ ಸಹಕಾರದೊಂದಿಗೆ ಅತ್ಯಂತ ವೈಭವದಿಂದ ಉಡುಪಿಯ ನಾಡ ಹಬ್ಬದಂತೆ ಆಯೋಜಿಸುವ ಸಂಕಲ್ಪ ಮಾಡಿದ್ದು, ಗೌರವ ಅಧ್ಯಕ್ಷರಾಗಿ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಲಹೆ ಸೂಚನೆ ಸಹಕಾರ ಮಾರ್ಗದರ್ಶನ ನೀಡುವಂತೆ ತಿಳಿಸಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಹೆಗ್ಗಡೆಯವರು ಸಂಪೂರ್ಣ ಸಹಕಾರದ ಭರವಸೆಯನ್ನು ನೀಡಿದರು.

ಬಳಿಕ ಡಿ ಹರ್ಷೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ನವಂಬರ್ 7ರಂದು ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸ್ವಾಗತ ಸಮಿತಿ ಸಭೆಯನ್ನು ನಡೆಸುವುದೆಂದು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಪರ್ಯಾಯ ಶ್ರೀಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಸಮಿತಿಯ ಕಾರ್ಯಾಧ್ಯಕ್ಷ ಕಟೀಲು ಗೋಪಾಲ ಕೃಷ್ಣ ಅಸ್ರಣ್ಣ, ಕೋಶಾಧಿಕಾರಿ, ಜಯಪ್ರಕಾಶ್ ಕೆದ್ಲಾಯ ಸಂಚಾಲಕರಾದ ಶ್ರೀ ವಿಷ್ಣುಮೂರ್ತಿ ಆಚಾರ್ಯ ಮತ್ತು ಶ್ರೀಧರ ಭಟ್ ಉಚ್ಚಿಲ ಮತ್ತು ಸಮಿತಿ ಕಾರ್ಯದರ್ಶಿ ಮೋಹನ್ ಭಟ್ ಪ್ರಚಾರ ಸಮಿತಿಯ ನಂದನ್ ಜೈನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *