ಉಡುಪಿ: ದೀಪಾವಳಿ ಹಬ್ಬದ ನಿಮಿತ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಮಿಯಾರ್, ಕುಂಜಾಲು ಮತ್ತು ತೆಕ್ಕಟ್ಟೆ ಪ್ರದೇಶಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ

