ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಬೀಚ್ ಬಳಿ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಹಾಗೂ ಚಂಡಮಾರುತ ಪರಿಣಾಮವಾಗಿ ಕಡಲ್ಕೊರೆತ ಉಂಟಾಗುತ್ತಿದ್ದು ಇಂದು ದಿನಾಂಕ 27-10-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ತುರ್ತು ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು ಹಾಗೂ ಶಾಶ್ವತ ಪರಿಹಾರಕ್ಕೆ ಸಚಿವರ ಬಳಿ ಚರ್ಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಕೋಟೆ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ್ ಕೋಟ್ಯಾನ್, ನಾಗರಾಜ್ ಮೆಂಡನ್, ಶಕ್ತಿ ಕೇಂದ್ರದ ಹರ್ಷಿತ್ ಹಾಗೂ ಗಣೇಶ್ ಮಟ್ಟು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

