ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ 30 ಗಂಟೆಗಳ ಹ್ಯಾಕಥಾನ್“ಹ್ಯಾಕೋತ್ಸವ 2025” ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಆವರಣದಲ್ಲಿ ನಡೆಯಿತು.
ಸಮಾರಂಭದಲ್ಲಿ ಫೆರ್ನಾಂಡಿಸ್ ಗ್ರೂಪ್‌ನ ಸಂಸ್ಥಾಪಕರಾದ ವಿಲ್ಸನ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿ ಹೇಳಿ, ವಿಫಲತೆ ಅಂತ್ಯವಲ್ಲಅದು ಯಶಸ್ಸಿನ ಒಂದು ಮೆಟ್ಟಿಲು ಎಂದರು. ವಿದ್ಯಾರ್ಥಿಗಳು ನಿರಂತರ ಕಲಿಕೆ ಮತ್ತು ಹೊಸತನದತ್ತ ಹೆಜ್ಜೆ ಹಾಕಬೇಕೆಂದು ಕಿವಿ ಮಾತು ಹೇಳಿದರು.
ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣಎಸ್ ಐತಾಳ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರ ಮಟ್ಟದ ಹ್ಯಾಕಥಾನ್ ಆಯೋಜಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ತ್ಯಾಗ ಮತ್ತು ನಿಷ್ಠೆ ಅಭಿನಂದನೀಯ. ಇಂತಹಾ ಕಾರ್ಯಕ್ರಮವು ಯುವ ಮನಸ್ಸುಗಳಲ್ಲಿ ನವೀನತೆ, ಸಹಕಾರ ಮತ್ತು ಸಮಸ್ಯೆ ಪರಿಹಾರ ಕೌಶಲ್ಯಗಳನ್ನು ಉತ್ತೇಜಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಡೀನ್ ಡಾ. ನಾಗರಾಜ್ ಭಟ್, ಕಾರ್ಯಕ್ರಮದ ಸಂಯೋಜಕರಾದ ಚಂದ್ರಶೇಖರ ರಾವ್ ಕುತ್ಯಾರು, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ದೇಶದ ವಿವಿಧ ಕಾಲೇಜುಗಳಿಂದ ಸುಮಾರು 400 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ

