×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಂಕಪ್ಪ . ಎ ರವರಿಗೆ ಕರುನಾಡ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು: ಕಾನೂನು ಕ್ಷೇತ್ರ ಮತ್ತು ಬಡ ವಿದ್ಯಾರ್ಥಿ ಗಳಿಗೆ ಪ್ರೋತ್ಸಹ ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುವ ತೆರೆಮರೆಯ ಸಮಾಜ ಸೇವಕ ಸಂಕಪ್ಪ . ಎಇವರಿಗೆ 2024-25 ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ “ಕರುನಾಡ ರತ್ನ” ನೀಡಿ ಗೌರವಿಸಲಾಯಿತು.

ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನವೆಂಬರ್ 13 ರಂದು “ಕಲಾಗ್ರಾಮ”ಏನ್.ಜಿ.ಇ.ಎಫ್ ಲೇಔಟ್, ಜ್ಞಾನಭಾರತಿ, ಬೆಂಗಳೂರು ಸಭಾಂಗಣದಲ್ಲಿ ನಡೆದ 2024-25 ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ “ಕರುನಾಡ ರತ್ನ” ಬಿರುದು ಹಾಗು ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಕನ್ನಡ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಸಂಕಪ್ಪ . ಎ ಯವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ವಿ.ಸದಾನಂದ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್,ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಅಧ್ಯಕ್ಷರಾದ ರಮೇಶ್ ಎಸ್ .ಜಿ ಹಾಗು ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *