×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ಮತ್ತು ಸನ್ಮಾನ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ

ಪಡುಬಿದ್ರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮತ್ತು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ವಿಷಯಾಧಾರಿತವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವೈ. ಲಕ್ಷ್ಮಣ ಸಭಾಂಗಣದಲ್ಲಿ ಶನಿವಾರ ಬೆಳಿಗ್ಗೆ ನೆರವೇರಿತು.

ಕಾರ್ಯಕ್ರಮವನ್ನು ಭಾರತ್ ಕೊ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಉದ್ಘಾಟಿಸಿ ಮಾತನಾಡಿದ ಅವರು ತಳಮಟ್ಟ ಜನ ಸಂಪರ್ಕ ದಿಂದಾಗಿ ಸಂಸ್ಥೆ ಅಭಿವೃದ್ಧಿ ಪಡೆಯಲು ಸದ್ಯ ಯಾವುದೇ ಗ್ರಾಹಕರು ಬಂದಲ್ಲಿ ಸಿಬ್ಬಂದಿಗಳು ನಗು ಮಖದಿಂದ ಸೇವೆ ನೀಡಬೇಕು ಎಂದು ತಿಳಿಸಿದರು

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಯಾವುದೇ ಸಹಕಾರಿ ಸಂಸ್ಥೆಯಲ್ಲಿ ರಾಜ ಕಾರಣ ಇರಕೂಡದು. ಅದು ಸಂಸ್ಥೆಗೆ ಮುಳುವಾಗುತ್ತದೆ. ಈ ನಿಟ್ಟಿನಲ್ಲಿ ಗ್ರಾಮದ ಎಲ್ಲಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಜಕೀಯ ರಹಿತವಾಗಿ ಸಮಾಜಮುಖಿ ಕೆಲಸ ಮಾಡುತ್ತಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಮತ್ತು ಅವರ ತಂಡ ಶ್ಲಾಘನಾರ್ಹರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಇದರ ಅಧ್ಯಕ್ಷ ಬಿ. ಜಯಕರ ಶೆಟ್ಟಿ, ಇಂದ್ರಾಳಿಯವರು ರೈತರಿಗೆ ಕೃಷಿ ಪ್ರೋತ್ಸಾಹ ಧನ ವಿತರಿಸಿ ಸಂಸ್ಥೆಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಾರತ್ ಕೊ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಗೌರವಿಸಿ ಸನ್ಮಾನಿಸಲಾಯಿತು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಾಸ್ತಾವಿಕವಾಗಿ ಸಂಸ್ಥೆ ನಡೆದುಬಂದ ದಾರಿಯ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧತಿ ಶ್ರೀಮತಿ ಲಾವಣ್ಯಕೆ . ಆರ್, ಜಿಲ್ಲಾ ಸಹಕಾರ ಯೂನಿಯನ್ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅನುಷಾ ಕೋಟ್ಯಾನ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ನಿಶ್ಚಿತಾ ಪಿ. ಎಚ್, ಅಶೋಕ್ ಕುಮಾರ್ ಬಲ್ಲಾಳ್, ಗಂಗಾಧರ ಶೆಟ್ಟಿ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ಸುಧೀರ್ ಕುಮಾರ್ ಸ್ವಾಗತಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ನಿಶ್ಚಿತಾ ಪಿ. ಎಚ್ ವಂದಿಸಿದರು.

Leave a Reply

Your email address will not be published. Required fields are marked *