ಉಡುಪಿ: ಅಖಿಲ ಭಾರತ ಸಹಕಾರ ಸಪ್ತಾಹದ ಸನ್ಮಾನ ಕಾರ್ಯಕ್ರಮವು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಕುಕ್ಕಿಕಟ್ಟೆ ಇವರ ಆಶ್ರಯದಲ್ಲಿ ಅಲೆವೂರಿನ ಸಮೃದ್ಧಿ ಸಹಕಾರ ಸೌಧದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಸಹಕಾರಿ ಸಂಸ್ಥೆಗಳ ಮೇಲೆ ನಂಬಿಕೆ ವಿಶ್ವಾಸ ಇಟ್ಟಿರುವುದರಿಂದ ಸಹಕಾರಿ ಸಂಸ್ಥೆಗಳು ಬೆಳವಣಿಗೆ ಹೊಂದುವುದಕ್ಕೆ ಪೂರಕವಾಗಿದೆ. ಎಂದು ಹೇಳಿದರು
ಸಾಧಕರಿಗೆ ಸಮ್ಮಾನ
ಸಾಧಕ ಕೃಷಿಕ ಸುಬ್ರಾಯ ಕಾಮತ್, ಪ್ರಗತಿಪರ ಹೈನುಗಾರ ರಾಕೇಶ್ ರೈ, ಹಿರಿಯ ನೇಕಾರ ಸಂಜೀವ ಶೆಟ್ಟಿಗಾರ್, ಗೃಹ ಉತ್ಪನ್ನಗಳ ಸ್ಪೋದ್ಯೋಗ ಸಾಧಕಿ ನಿರ್ಮಲಾ ಆ ಅವರನ್ನು ಸಮ್ಮಾನಿಸಲಾಯಿತು. ಸಹಕಾರ ವಿಷಯಗಳ ಕುರಿತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ರಾಲ್ ಸುವರ್ಣ, ಉಡುಪಿ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್., ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಜಿ. ಸುಧೀರ್ ಕುಮಾರ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರುಗಳಾದ ಹೆಚ್. ಗಂಗಾಧರ ಶೆಟ್ಟಿ, ಶ್ರೀಧರ ಪಿ. ಎಸ್., ಸುಧೀರ್ ವೈ ಪಾಲ್ಗೊಂಡರು.
ಸಹಕಾರಿ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ” ಕುರಿತು ದಿಕ್ಕೂಚಿ ಭಾಷಣ ಮಾಡಿದ ಕದಿಕೆ ಟ್ರಸ್ಟ್ ಅಧ್ಯಕ್ಷೆ ಮಮತಾ ರೈ ಮಾತನಾಡಿ ಸಹಕಾರಿ ಸಂಸ್ಥೆಗಳು ಮಹಿಳಾ ಸದಸ್ಯರ ಉದ್ಯಮ ಶೀಲತೆ ಅಭಿವೃದ್ಧಿ, ಕೌಶಲ್ಯ ತರಬೇತಿಗೆ ಪ್ರಾಧಾನ್ಯತೆ ನೀಡುವಂತೆ ಕರೆ ನೀಡಿದರು.

ಕೊರಂಗ್ರಪಾಡಿ ಸಹಕಾರಿ ಸಂಘದ ಉಪಾಧ್ಯಕ್ಷ ದಿನೇಶ್ ಕಿಣಿ ಸ್ವಾಗತಿಸಿ, ಸತೀಶ್ ಶೆಟ್ಟಿ ಇವರು ಕಾರ್ಯಕ್ರಮ ನಿರೂಪಿಸಿದರು. ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಇವರು ವಂದಿಸಿದರು. ಕೊರಂಗ್ರಪಾಡಿ ಸಹಕಾರಿ ವ್ಯವಸಾಯನಿಕ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಎಂ ಉಪಸ್ಥಿತರಿದ್ದರು.

