
ಕಟಪಾಡಿ : ಬಿಜೆಪಿ ಪಕ್ಷದ ಮಹಾಶಕ್ತಿಕೇಂದ್ರದ ಸಭೆ ಕಟಪಾಡಿಯಲ್ಲಿ ನಡೆಯಿತು.ಪ್ರಧಾನಿ ಮೋದಿ ಜನ್ಮದಿನದಿಂದ ಗಾಂಧಿ ಜಯಂತಿ ತನಕ ಪಕ್ಷ ಕೊಟ್ಟ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು.ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆದು ಮಾಹಿತಿ ವಿನಿಮಯ ಮಾಡಿಕೊಂಡು ಮುಂಬರುವಂತಹ ಯಾವುದೇ ಚುನಾವಣೆಗಳಿಗೆ ಪಕ್ಷ ಸಂಪೂರ್ಣ ಸನ್ನದ್ಧವಾಗುವಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷ ವಿಶ್ವನಾಥ ಕುರ್ಕಾಲು ವಹಿಸಿದ್ದರು. ಬಿಜೆಪಿ ಕಾಪು ಗೋಪಾಲಕೃಷ್ಣ ರಾವ್ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಸಹಕಾರ ಪ್ರಕೋಷ್ಠ ಜಿಲ್ಲಾ ಸಂಚಾಲಕರಾದ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಮುಂತಾದವರು ಉಪಸ್ಥಿತರಿದ್ದರು

