
ಕಟಪಾಡಿ ರಾಷ್ಟ್ರೀಯ ಹೆದ್ದಾರಿ ೬೬ ರ ಪೋಸಾರು ಜಂಕ್ಷನ್ ನಲ್ಲಿ ಸೈಕಲಿನಲ್ಲಿ ರಸ್ತೆ ದಾಟುತ್ತಿದ್ದಾಗ ಬಸ್ಸೊಂದು ಡಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡ ಗಟನೆ ಶುಕ್ರವಾರ ಸಂಜೆ ಘಟಿಸಿದೆ.
ಬಾಲಕನನ್ನು ಕಟಪಾಡಿಯ ಎಸ್‌ವಿಎಸ್ ಶಾಲಾ ೭ ನೇ ತರಗತಿಯ ವಿದ್ಯಾರ್ಥಿ ಪ್ರಥಮ್ ಶೆಣೈ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

