ಶಿರ್ವ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆ, ಉಡುಪಿಯಲ್ಲಿ ಇಂದು ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2 ಪ್ರಥಮ ಹಾಗೂ 3 ದ್ವಿತೀಯ ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಶಾಲೆಯ ಒಬ್ಬ ವಿದ್ಯಾರ್ಥಿಯು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದವು ಶುಭ ಹಾರೈಸಿ ಅಭಿನಂದಿಸಿದೆ.

